ಕರವೇ ತಾಲೂಕು ಪದಾಧಿಕಾರಿಗಳ ಆಯ್ಕೆ, ಸದಸ್ಯತ್ವ ಅಭಿಯಾನ ಇಂದು
Karave taluk office bearers election, membership drive today
ಕರವೇ ತಾಲೂಕು ಪದಾಧಿಕಾರಿಗಳ ಆಯ್ಕೆ, ಸದಸ್ಯತ್ವ ಅಭಿಯಾನ ಇಂದು
ದೇವರಹಿಪ್ಪರಗಿ 25: ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ ಶೆಟ್ಟಿ ಬಣ)ದಿಂದ ನೂತನ ದೇವರಹಿಪ್ಪರಗಿ ತಾಲೂಕ ಪದಾಧಿಕಾರಿಗಳ ಆಯ್ಕೆ ಹಾಗೂ ಸದಸ್ಯತ್ವ ಅಭಿಯಾನವನ್ನು ಆಯೋಜಿಸಲಾಗಿದೆ ಜಿಲ್ಲಾಧ್ಯಕ್ಷರಾದ ಶ್ರೀಶೈಲ ಮುಳಜಿ ಅವರ ಆದೇಶದ ಮೇರೆಗೆ ಕರವೇ ಮುಖಂಡ ರಹಿಮಾನಸಾಬ್ ಕನಕಾಲ್ ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ದಿ.26ರಂದು ರವಿವಾರ ಬೆಳಗ್ಗೆ 10 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಬೈಕ್ ರಾ್ಯಲಿ ಮೂಲಕ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನೂತನ ತಾಲೂಕು ಪದಾಧಿಕಾರಿಗಳ ಆಯ್ಕೆ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗುವುದು. ಈ ಸಂದರ್ಭದಲ್ಲಿ ರಾಜ್ಯ ಪದಾಧಿಕಾರಿಗಳಾದ ಬಸವರಾಜ ತಾಳಿಕೋಟಿ, ಉತ್ತರ ಕರ್ನಾಟಕ ಅಧ್ಯಕ್ಷರಾದ ಶರಣು ಗದ್ದುಗೆ ಹಾಗೂ ಜಿಲ್ಲಾಧ್ಯಕ್ಷರಾದ ಶ್ರೀಶೈಲ ಮುಳಜಿ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾದ ಸಭೆಯಲ್ಲಿ ಜಿಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಾಲೂಕು ಘಟಕದ ಪದಾಧಿಕಾರಿಗಳು ಆಯ್ಕೆ ಹಾಗೂ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರವೇ ಮುಖಂಡ ರಹಿಮಾನಸಾಬ್ ಕನಕಾಲ್ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 