ಕಾರ್ಗಿಲ್ ವಿಜಯೋತ್ಸವ: ಸೈನಿಕರು ಮತ್ತು ರೈತರಿಗೆ ಸಮಾಜದಿಂದ ಸದಾ ಗೌರವ ಸಿಗಬೇಕು : ಕವಿತಾ ಮಿಶ್ರಾ
Kargil Victory Day: Soldiers and farmers should always receive respect from society: Kavita Mishra
ಲೋಕದರ್ಶನ ವರದಿ
ಬೆಳಗಾವಿ 26: ದೇಶದ ಗಡಿಯಲ್ಲಿ ಹಗಲಿರುಳು ಸೇವೆ ಸಲ್ಲಿಸುವ ಸೈನಿಕರ ತ್ಯಾಗದಿಂದಲೇ ದೇಶದ ಜನರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಸೈನಿಕರು ಹಾಗೂ ಅವರ ಕುಟುಂಬಗಳಿಗೆ ಸಮಾಜ ನಿರಂತರ ಗೌರವ ನೀಡಬೇಕು ಎಂದು ಪ್ರಗತಿಪರ ರೈತ ಮಹಿಳೆ ಹಾಗೂ ಕೃಷಿ ಉದ್ಯಮಿ ಕವಿತಾ ಮಿಶ್ರಾ ಹೇಳಿದರು. ನಗರದ ಧರ್ಮನಾಥ ಭವನದಲ್ಲಿ ಮಾಜಿ ಸೈನಿಕರ ಮಹಾ ಒಕ್ಕೂಟದ ವತಿಯಿಂದ ಭಾನುವಾರ ಆಯೋಜಿಸಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಮತ್ತು ಸೈನಿಕರು ದೇಶದ ನಿಜವಾದ ಯೋಧರು. ಅನ್ನದಾತರು ಹಾಗೂ ಗಡಿಯನ್ನು ಕಾಪಾಡುವ ಯೋಧರಿಗೆ ಸಮಾನ ಗೌರವ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಅವರು ಹೇಳಿದರು. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ದೇಶಕ್ಕೆ ಅನ್ನ ನೀಡಿದ ರೈತರ ಸೇವೆಯನ್ನು ಸ್ಮರಿಸಿದ ಅವರು, ಮಹಿಳೆಯರು ಸ್ವಾಭಿಮಾನ ಹಾಗೂ ಸಂಸ್ಕಾರದೊಂದಿಗೆ ಬದುಕಿದಾಗ ಸಮಾಜ ಮತ್ತಷ್ಟು ಸದೃಢವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಮಾಜಿ ಸೈನಿಕರ ಮಹಾ ಒಕ್ಕೂಟದ ಜಿಲ್ಲಾಧ್ಯಕ್ಷ ಜಗದೀಶ ಪೂಜೇರಿ ಮಾತನಾಡಿ, ನಿವೃತ್ತ ಸೈನಿಕರಿಗೆ ಸರ್ಕಾರ ಸೂಕ್ತ ಗೌರವ ಹಾಗೂ ಉದ್ಯೋಗ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಸೈನಿಕರ ಸಮಸ್ಯೆಗಳ ಕುರಿತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದ್ದು, ಸರ್ಕಾರ ಶೀಘ್ರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 