ಕಾರ್ಗಿಲ್ ವಿಜಯ ದಿವಸ: ಸೈನಿಕರಾಗುವುದು ಕೇವಲ ಸರ್ಕಾರಿ ಉದ್ಯೋಗವಲ್ಲ, ದೇಶಸೇವೆ : ಮಹಾಂತಗೌಡ ಬಿರಾದಾರ
Kargil Vijay Diwas: Becoming a soldier is not merely a government job, but service to the nation – M
ಮುದ್ದೇಬಿಹಾಳ 27 : ಪಾಲಕರು ತಮ್ಮ ಮಕ್ಕಳಿಗೆ ಸರ್ಕಾರಿ ಉದ್ಯೋಗ ದೊರೆಯಲಿ ಎಂಬ ಆಶಯ ಹೊಂದಿರುತ್ತಾರೆ. ಆದರೆ ಸೈನಿಕರಾಗುವುದು ಕೇವಲ ಸರ್ಕಾರಿ ನೌಕರಿಯಲ್ಲ, ಅದು ರಾಷ್ಟ್ರಸೇವೆಯ ಅತ್ಯುನ್ನತ ರೂಪವಾಗಿದೆ ಎಂದು ಬಿ.ಎ.ಎಸ್. ಇಂಟರ್ನ್ಯಾಷನಲ್ ಸ್ಕೂಲ್ ಅಧ್ಯಕ್ಷ ಮಹಾಂತಗೌಡ ಬಿರಾದಾರ ಹೇಳಿದರು.ತಾಲೂಕಿನ ಹಡಲಗೇರಿ ವ್ಯಾಪ್ತಿಯ ಬಿ.ಎ.ಎಸ್. ಇಂಟರ್ನ್ಯಾಷನಲ್ ಸ್ಕೂಲ್ಕ್ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯ ದಿವಸ ಸ್ಮರಣಾರ್ಥ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ದೇಶದ ಗಡಿಯಲ್ಲಿ ಸೈನಿಕರು ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಕಾರಣವೇ ದೇಶದ ನಾಗರಿಕರು ನೆಮ್ಮದಿಯಿಂದ ಬದುಕಲು ಸಾಧ್ಯವಾಗಿದೆ. ತಮ್ಮ ಜೀವವನ್ನೇ ಪಣಕ್ಕಿಟ್ಟು ದೇಶದ ಭದ್ರತೆಗಾಗಿ ಶ್ರಮಿಸುವ ಸೈನಿಕರಿಗೆ ನಾವು ಸಲ್ಲಿಸುವ ಗೌರವ ಎಷ್ಟೇ ಇದ್ದರೂ ಕಡಿಮೆಯೇ. ಸೈನಿಕರ ತ್ಯಾಗ ಮತ್ತು ಸೇವೆಯನ್ನು ಪ್ರತಿಯೊಬ್ಬರೂ ಸ್ಮರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದ ನಿವೃತ್ತ ಕರ್ನಲ್ ಶಿವಾನಂದ ಬಿರಾದಾರ ಮಾತನಾಡಿ, ಭಾರತದ ಸ್ವಾತಂತ್ರ್ಯ ಮತ್ತು ಭದ್ರತೆಗಾಗಿ ಅನೇಕ ದೇಶಭಕ್ತರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ದೇಶದ ಗಡಿಯನ್ನು ಕಾಯುವುದು ಅತ್ಯಂತ ಪುಣ್ಯದ ಕಾರ್ಯ. ಪ್ರತಿಯೊಂದು ಕುಟುಂಬದಿಂದ ಒಬ್ಬರಾದರೂ ಸೈನಿಕರಾಗಿ ದೇಶಸೇವೆ ಮಾಡಬೇಕು. ಇದರಿಂದ ದೇಶ ಮತ್ತಷ್ಟು ಸದೃಢವಾಗುತ್ತದೆ ಎಂದು ಹೇಳಿದರು.
ಬಿ.ಎ.ಎಸ್. ಇಂಟರ್ನ್ಯಾಷನಲ್ ಸ್ಕೂಲ್ ವಿದ್ಯಾರ್ಥಿಗಳು ಕಾರ್ಗಿಲ್ ವಿಜಯ ದಿವಸವನ್ನು ಆಧರಿಸಿ ನೀಡಿದ ನೃತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ದೇಶಭಕ್ತಿಯ ಭಾವನೆಯನ್ನು ಮೂಡಿಸಿದವು. ವಿದ್ಯಾರ್ಥಿಗಳಿಂದ ಕಾರ್ಗಿಲ್ ವಿಜಯ ದಿವಸದ ಮಹತ್ವ ಕುರಿತು ಭಾಷಣಗಳೂ ನಡೆದವು. ಈ ಸಂದರ್ಭದಲ್ಲಿ ಶಿಕ್ಷಕ ಸಂಗಪ್ಪ ಬಿರಾದಾರ ಮಾತನಾಡಿದರು. ಸಂಸ್ಥೆಯ ಕಾರ್ಯದರ್ಶಿ ಸುಮಂಗಲ ಬಿರಾದಾರ, ನಿರ್ದೇಶಕಿ ಗೀತಾ ಬಿರಾದಾರ, ಆಡಳಿತಾಧಿಕಾರಿ ಪ್ರಭುಗೌಡ ಬಿರಾದಾರ, ಪ್ರಾಚಾರ್ಯ ಅಶೋಕ್ ತುಪ್ಪದ,ಸತೀಶ್ ವಾಲಿಕಾರ ಸೇರಿದಂತೆ ಶಿಕ್ಷಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಸಂಗೀತ ಶಿಕ್ಷಕರು ಸ್ವಾಗತಿಸಿದರು. ರಾಜ್ಮಾ ಕಂದಗಲ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿನಿಯರು ವಂದಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 