ವಿಶಾಖಪಟ್ಟಣ, ನ.14 : ಸೈಯ್ಯದ್ ಮುಷ್ತಾಕ್ ಅಲಿ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಕರ್ನಾಟಕ ಐದನೇ ಪಂದ್ಯದಲ್ಲಿ ಬಿಹಾರ ತಂಡವನ್ನು ಎದುರಿಸಲಿದ್ದು, ಅಗ್ರ ಸ್ಥಾನ ಬದ್ರ ಪಡಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ.
ಕರ್ನಾಟಕ ಆಡಿರುವ 4 ಪಂದ್ಯಗಳಲ್ಲಿ 3 ಜಯದೊಂದಿಗೆ 12 ಅಂಕ ಕಲೆ ಹಾಕಿದ್ದು ಮೊದಲ ಸ್ಥಾನದಲ್ಲಿದೆ. ಬೀಹಾರ ಆಡಿರುವ ಮೂರು ಪಂದ್ಯಗಳನ್ನು ಸೋತು ಕೊನೆಯ ಸ್ಥಾನದಲ್ಲಿದೆ. ಕರ್ನಾಟಕದ ತಂಡದ ಪರ ದೇವದತ್ ಪಡಿಕ್ಕಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಆಡಿರುವ 4 ಪಂದ್ಯಗಳಲ್ಲಿ 255 ರನ್ ಕಲೆ ಹಾಕಿದೆ. ಇದರಲ್ಲಿ ಎರಡು ಅರ್ಧಶತಕ ಹಾಗೂ ಒಂದು ಶತಕ ಸೇರಿವೆ.
ಆರಂಭಿಕ ರೋಹನ್ ಕದಂ ನಾಲ್ಕು ಪಂದ್ಯಗಳಲ್ಲಿ 129 ರನ್ ಸೇರಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕರುಣ್ ನಾಯರ್, ಕೆ.ಗೌತಮ್, ಸಿಸೋಡಿಯಾ, ಶ್ರೇಯಸ್ ಗೋಪಾಲ್, ಆರ್.ಸಮರ್ಥ್ ಅಬ್ಬರಿಸುವ ಅನಿವಾರ್ಯತೆ ಇದೆ.
ಬೌಲಿಂಗ್ ನಲ್ಲಿ ಶ್ರೇಯಸ್ ಗೋಪಾಲ್ 8 ವಿಕೆಟ್ ಕಬಳಿಸಿದ್ದಾರೆ. ವಿ.ಕೌಶಿಕ್ 5, ಕೆ.ಗೌತಮ್ ಹಾಗೂ ಅಬಿಮನ್ಯು ಮಿಥುನ್ ತಲಾ ಮೂರು ವಿಕೆಟ್ ಪಡೆದಿದ್ದಾರೆ.
ಇನ್ನು ಬಿಹಾರ್ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಗೆಲುವು ಸಾಧಿಸಲು ಪ್ಲಾನ್ ಮಾಡಿಕೊಂಡಿದೆ. ಶುಕ್ರವಾರದ ಪಂದ್ಯದಲ್ಲಿ ಗೆಲುವು ಯಾರ ಪಾಲಾಗುತ್ತದೆ ಎಂಬುದು ಕುತೂಹಲ ಮೂಡಿಸಿದೆ.