ಸರ್ಕಾರಿ ನೌಕರರಿಗೆ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ
Karnataka Arogya Sanjeevini Yojana for Government Employees
ಧಾರವಾಡ 26: ರಾಜ್ಯ ಸರ್ಕಾರಿ ನೌಕರರಿಗೆ ನಗದು ರಹಿತ ಚಿಕಿತ್ಸೆ ಸರ್ಕಾರಕ್ಕೆ ಅಭಿನಂದನೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಇವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆಯನ್ನು ಒದಗಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅಕ್ಟೋಬರ್ 2025 ಮಾಹೆಯಿಂದ ಜಾರಿಗೊಳಿಸಿ ಸರ್ಕಾರವು ಆದೇಶ ಹೊರಡಿಸಿದೆ.
ಮುಖ್ಯಮಂತ್ರಿಗಳಿಗೆ, ಉಪಮುಖ್ಯಮಂತ್ರಿಗಳಿಗೆ, ಧಾರವಾಡ ಜಿಲ್ಲೆಯ ಸಚಿವರು ಹಾಗೂ ಶಾಸಕರುಗಳಿಗೆ ಮತ್ತು ಈ ಯೋಜನೆಯನ್ನು ಅನುಷ್ಟಾನಗೊಳಿಸಲು ಸತತ ಪ್ರಯತ್ನ ಮಾಡಿರುವ ರಾಜ್ಯಾಧ್ಯಕ್ಷರಾದ ಸಿ,ಎಸ್,ಷಡಾಕ್ಷರಿ ಮತ್ತು ರಾಜ್ಯದ ಪದಾಧಿಕಾರಿಗಳಿಗೆ ಜಿಲ್ಲೆಯ ಸಮಸ್ತ ಅಧಿಕಾರಿ,ನೌಕರರ ಪರವಾಗಿ ಧಾರವಾಡ ಜಿಲ್ಲಾ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡರ ಹಾಗೂ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 15 ಸಾವಿರ ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರು ಸೇರಿಸಿದಂತೆ ಅಂದಾಜು 75 ಸಾವಿರ ಫಲಾನುಭವಿಗಳು ಸೇರಿದಂತೆ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 5.25 ಲಕ್ಷ ಸರ್ಕಾರಿ ನೌಕರರು ಹಾಗೂ 25 ಲಕ್ಷ ಕುಟುಂಬ ಸದಸ್ಯರು ಈ ಯೋಜನೆಯ ಲಾಭ ಪಡೆಯಲಿದ್ದಾರೆ. ಈ ಯೋಜನೆಯ ಸೌಲಭ್ಯ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ,ನೌಕರರು, ಪ್ರತಿ ತಿಂಗಳು ಸರ್ಕಾರ ನಿರ್ದಿಷ್ಟ ಪಡಿಸಿರುವ ವಂತಿಗೆ ಅಕ್ಟೋಬರ್ 2025 ನೇ ಮಾಹೆಯಿಂದ ನೀಡಲಾಗುವುದು, ಪತಿ ಹಾಗೂ ಪತ್ನಿ ಇಬ್ಬರು ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವಂತಿಕೆ ನೀಡಬೇಕಾಗುವುದು. ಮಾಸಿಕ ವಂತಿಕೆ ನೀಡಲು ಇಚ್ಛಿಸದೆ ಇರುವ ನೌಕರರು ದಿನಾಂಕ:18.10.2025 ಒಳಗಾಗಿ ಸಂಬಂಧಿಸಿದ ಬಟವಾಡೆ ಅಧಿಕಾರಿಗಳಿಗೆ ಲಿಖಿತವಾಗಿ ಮನವಿ ನೀಡುವುದು. ರಾಜ್ಯ ಸರ್ಕಾರದ ಅಧಿಕಾರಿ ಹಾಗೂ ನೌಕರರ ತಂದೆ,ತಾಯಿ ಪಿಂಚಣಿದಾರರಾಗಿದ್ದಲ್ಲಿ ಅವರ ಮಾಸಿಕ ಆದಾಯ ಮಿತಿಯನ್ನು 17ಸಾವಿರ ರೂಗಳಿಂದ 27ಸಾವಿರ ರೂಗಳಿಗೆ ಹೆಚ್ಚಳ ಮಾಡಿದೆ. ವಿವಾಹಿತ ಸರ್ಕಾರಿ ಮಹಿಳಾ ನೌಕರರ ತಂದೆ,ತಾಯಿಯಿಂದರು ಸಹ ಈ ಯೋಜನೆಯ ವ್ಯಾಪ್ತಿಗೆ ಒಳಪಡಲಿದ್ದಾರೆ.
ಈ ಎಲ್ಲಾ ಯೋಜನೆಯನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ನಿರ್ವಹಿಸಲಿದೆ. ರಾಜ್ಯ ಸರ್ಕಾರಿ ನೌಕರರಿಗೆ ಈ ಯೋಜನೆಯನ್ನು ಅಕ್ಟೋಬರ್ 2025 ಮಾಹೆಯಿಂದ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 