ಕರ್ನಾಟಕ ಕಾಂಗ್ರೆಸ್ ವತಿಯಿಂದ ಕೇರಳ ಚುನಾವಣೆಗೆ ಪದಾಧಿಕಾರಿಗಳ ನಿಯೋಜನೆ
Karnataka Congress appoints office bearers for Kerala elections
ಶಿರಹಟ್ಟಿ 03 : ಕೇರಳ ರಾಜ್ಯ ವಿಧಾನಸಭಾ ಚುನಾವಣೆ-2026 ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದಿಂದ ಪಟ್ಟಣದ ಯುವ ನಾಯಕ ಮುತ್ತು ಭಾವಿಮನಿ ಅವರನ್ನು ಕೇರಳದ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲಾಗಿದೆ ಎಂದು ಏಕಅಅ ಖಅ ವಿಭಾಗದ ಅಧ್ಯಕ್ಷರಾದ ಆರ್. ಧರ್ಮಸೇನ ಅವರು ತಿಳಿಸಿದ್ದಾರೆ.ಈ ಸಂಬಂಧ ಏಕಅಅ ಖಅ ವಿಭಾಗದ ಅಧ್ಯಕ್ಷರಾದ ಆರ್. ಧರ್ಮಸೇನ ಅವರು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಅಧಿಕೃತ ಪತ್ರ ಬರೆದಿದ್ದು, ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುವ ಸದಸ್ಯರ ಪಟ್ಟಿಯನ್ನು ಕಳುಹಿಸಿದ್ದಾರೆ.
ಪಟ್ಟಿಯ ಪ್ರಕಾರ, ಉಪಾಧ್ಯಕ್ಷರು, ಕನ್ವೀನರ್ಗಳು ಹಾಗೂ ಇಸಿ ಸದಸ್ಯರನ್ನು ಕೇರಳದ ವಿವಿಧ ಭಾಗಗಳಿಗೆ ನೇಮಕ ಮಾಡಲಾಗಿದೆ. ಈ ತಂಡವು ಕಾಸರಗೋಡು, ಸುಲ್ತಾನ್ ಬತ್ತೇರಿ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಹಾಗೂ ಸಂಘಟನೆ ಬಲಪಡಿಸುವ ಕೆಲಸಗಳನ್ನು ನಿರ್ವಹಿಸಲಿದ್ದಾರೆ.ಈ ಕ್ರಮದಿಂದ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು ಕೇರಳ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಪಕ್ಷದ ಗೆಲುವಿಗೆ ಶ್ರಮಿಸಲಿದ್ದಾರೆ.ಈ ಪತ್ರದ ಪ್ರತಿಯನ್ನು ಏಕಅಅ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಐಸಿಸಿ ನಾಯಕರಿಗೂ ಕಳುಹಿಸಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 