ನಂದಿಶ್ವರ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ

ಲೋಕದರ್ಶನ ವರದಿ

ಬೆಳಗಾವಿ 02: ಪ್ರತಿ ವರ್ಷದ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು ಈಗಿನ ಕರ್ನಾಟಕ 1956ರ ನವೆಂಬರ್ 1ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ. ರಾಜ್ಯೋತ್ಸವ ದಿನವನ್ನು ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ರಜಾದಿನವೆಂದು ಪಟ್ಟಿ ಮಾಡಲಾಗಿದೆ ಮತ್ತು ವಿಶ್ವದಾದ್ಯಂತ ಕನ್ನಡಿಗರು ಇದನ್ನು ಆಚರಿಸುತ್ತಾರೆ. ಕನರ್ಾಟಕ ಸರ್ಕಾರದಿಂದ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ. ಕನ್ನಡದ ಕುಲ ಪುರೋಹಿತರಾದ ಆಲೂರು ವೆಂಕಟರಾವ್, ಕರ್ನಾಟಕ ಏಕೀಕರಣ ಚಳುವಳಿಯನ್ನು 1905 ರಲ್ಲಿ ಪ್ರಾರಂಭಿಸಿದರು. 1950ರಲ್ಲಿ, ಭಾರತವು ಗಣರಾಜ್ಯವಾದ ನಂತರ ಭಾರತದ ವಿವಿಧ ಪ್ರಾಂತ್ಯಗಳು, ಭಾಷೆಗಳ ಆಧಾರದ ಮೇಲೆ ರಾಜ್ಯಗಳಾಗಿ ರೂಪ ಗೊಂಡವು. 

ಈ ಹಿಂದೆ ರಾಜರ ಆಳ್ವಿಕೆಯಲ್ಲಿ ದಕ್ಷಿಣ ಭಾರತದಲ್ಲಿ ಹಲವಾರು ಸಂಸ್ಥಾನಗಳನ್ನು ಒಳಗೊಂಡಂತೆ ರಾಜ್ಯಗಳು ರೂಪುಗೊಂಡಿದ್ದವು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು.1956 ರ ನವೆಂಬರ್ 1 ರಂದು, ಮದ್ರಾಸ್, ಮುಂಬಯಿ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯ ಉದಯವಾಯಿತು ಹಾಗೂ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು.ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು "ಮೈಸೂರು" ಹೆಸರನ್ನು ಉಳಿಸಿಕೊಂಡರು. ಆದರೆ ಉತ್ತರ ಕರ್ನಾಟಕದ ಜನರ ತರ್ಕ ಮಾನ್ಯತೆಗಾಗಿ, ರಾಜ್ಯದ ಹೆಸರು ನವೆಂಬರ್ 1, 1973 ರಂದು "ಕರ್ನಾಟಕ" ಎಂದು ಬದಲಾಯಿತು.ಈ ಸಂದರ್ಭದಲ್ಲಿ ದೇವರಾಜ ಅರಸ್ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. 

ಕರ್ನಾಟಕ ಏಕೀಕರಣದ ಮನ್ನಣೆ ಇತರ ವ್ಯಕ್ತಿಗಳಿಗೂ ಸೇರುತ್ತದೆ. ಅವರೆಂದರೆ ಅನಕೃ, ಕೆ. ಶಿವರಾಮ ಕಾರಂತ, ಕುವೆಂಪು, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಎ.ಎನ್.ಕೃಷ್ಣರಾವ್ ಮತ್ತು ಬಿ.ಎಂ.ಶ್ರೀಕಂಠಯ್ಯಇನ್ನು ಹಲವು ಮಹಾನ್ ನಾಯಕರು ಕನ್ನಡ ನಾಡಿಗೆ ಸೇವೆಯನ್ನು ಸಲ್ಲಿಸಿದ್ದಾರೆ ನೀವು ಕೂಡ ಕನ್ನಡಮ್ಮನ ಸೇವೆಯನ್ನು ಮಾಡಲು ಸಿದ್ದರಾಗಿ ಎಂದು ಮಕ್ಕಳಿಗೆ ಶಾಲೆಯ ಮುಖ್ಯ ಶಿಕ್ಷಕರಾದ ಸುರೇಶ ಕುಂಬಾರ ಸಂದೇಶ ನೀಡಿದರು. ಸಮಾರಂಭದಲ್ಲಿ ಶಿವಪ್ಪ ಶೆಟ್ಟರ, ಕಳಕಪ್ಪ ವಿವೇಕಿ, ಶಿಕ್ಷಕರು, ಮಕ್ಕಳು ಪಾಲ್ಗೋಂಡಿದ್ದರು, ಲತಾ ಗಡ್ಡದ ನಿರೂಪಿಸಿದರು.