ಲೋಕದರ್ಶನ ವರದಿ
ಬೆಳಗಾವಿ 03: ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕನ್ನಡವನ್ನು ಗರಿಷ್ಠ ಮಟ್ಟದಲ್ಲಿ ಬಳಸುವ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಕನ್ನಡದ ಕಂಪು ಪಸರಿಸುವಂತೆ ಮಾಡಬೇಕು ಎಂದು ಅಂಗಡಿ ತಾಂತ್ರಿಕ ಮತ್ತು ವ್ಯವಸ್ಥಾಪನಾ ಮಹಾವಿದ್ಯಾಲಯದ ಆಡಳಿತಾಧಿಕಾರಿ ರಾಜು ಜೋಶಿ ಹೇಳಿದರು.
ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಪೂಜಾರಿ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಹೇಳಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕನ್ನಡ ರಾಜ್ಯ, ಭಾಷೆ ಹಾಗೂ ಸಂಸ್ಕೃತಿಯ ಬಗ್ಗೆ ಅಭಿಮಾನವನ್ನು ಹೊಂದಬೇಕು ಮತ್ತು ತಾಂತ್ರಿಕತೆಯಲ್ಲಿ ಕನ್ನಡ ಭಾಷೆಯನ್ನು ಬಳಸುವ ಮೂಲಕ ಯಶಸ್ಸನ್ನು ಸಾಧಿಸಬೇಕೆಂದು ಕರೆ ನೀಡಿದರು.
ಮೆಕ್ಯಾನಿಕಲ್ ಇಂಜನೀಯರಿಂಗ್ ವಿಭಾಗದ ಪ್ರೊ. ನಿಖಿಲ್ ಚಂಗೂಲಿ ಮಾತನಾಡಿ, ಕರ್ನಾಟಕ ರಾಜ್ಯವು ಸಂಸ್ಕೃತಿ, ಕಲೆ ಮತ್ತು ಕೌಶಲ್ಯಗಳ ನಾಡಾಗಿದ್ದು, ಉನ್ನತ ಶಿಕ್ಷಣಕ್ಕೆ ಬೇರೆ ರಾಜ್ಯಗಳಿಗಿಂತ ಪ್ರಾಮುಖ್ಯತೆಯನ್ನು ಕೊಟ್ಟಿದೆ. ರಾಜ್ಯವು ಉನ್ನತ ತಾಂತ್ರಿಕ ಶಿಕ್ಷಣವನ್ನು ಒದಗಿಸುವಲ್ಲಿ ಯಶಸ್ಸನ್ನು ಪಡೆದಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಸ್ಥಾನವನ್ನು ಶ್ರದ್ಧೆಯಿಂದ ಕೆಲಸ ಮಾಡುವುದರಿಂದ ಉಳಿಸಿಕೊಳ್ಳಬೇಕೆಂದು ಹೇಳಿದರು.
ಪ್ರೊ. ಅಮರ ಬ್ಯಾಕೋಡಿ, ಪ್ರೊ. ಸಂಗೀತಾ ದೇಸಾಯಿ, ಡಾ. ಬಸವಾರೆಡ್ಡಿ, ಪ್ರೊ. ಕಿರಣ ಪೋತದಾರ, ಪ್ರೊ. ಹರುಷ ಪಾಟೀಲ, ದೈಹಿಕ ನಿದರ್ೇಶಕ ವಿಶಾಂತ ದಮೋಣೆ, ಗಿರೀಶ ಮಡ್ಡಿಮನಿ, ನಾಗಪ್ಪಾ ಅಂಗಡಿ, ತೇಜಸ್ವಿನಿ ಸೊಬರದ ಪಲ್ಲವಿ ಹೋಲ್ಕರ, ನಿಖಿತಾ ಪತ್ತಾರ, ಕಿಶೋರಗೌಡ ಪಾಟೀಲ, ರೋಹನ ತೇಲಿ ಸೇರಿದಂತೆ ಎಲ್ಲ ವಿಭಾಗಗಳ ಮುಖ್ಯಸ್ಥರು, ಶಿಕ್ಷಕರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕುಮಾರಿ ಸೌಂದರ್ಯ ಭಾವಗೀತೆ ಪ್ರಸ್ತುತಪಡಿಸಿದರು.
ಕಾಲೇಜಿನ ವಿದ್ಯಾರ್ಥಿ ಸುಶೀಲಕುಮಾರ ಹಂಚಿನಾಳ ಸ್ವಾಗತಿಸಿ ನಿರೂಪಿಸಿದರು. ದೈಹಿಕ ನಿರ್ದೇಶಕ ವಿಶಾಂತ ದಮೋಣೆ ವಂದಿಸಿದರು.
ಸಂಸ್ಥೆಯ ಅಧ್ಯಕ್ಷ ಹಾಗೂ ಸಚಿವ ಸುರೇಶ ಅಂಗಡಿ, ನಿರ್ಧೆಶಕಿ ಡಾ. ಸ್ಪೂರ್ತಿ ಪಾಟೀಲ ವಿದ್ಯಾರ್ಥಿ ಹಾಗೂ ಶಿಕ್ಷಕವೃಂದಕ್ಕೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು.