ಕರ್ನಾಟಕ ಪ.ಜಾತಿ . ಪ.ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ.ಜಿ ಬಳ್ಳಾರಿ ಪ್ರವಾಸ
Karnataka Scheduled Caste and Scheduled Tribes Nomadic Development Corporation Chairperson Pallavi G
ಬಳ್ಳಾರಿ 26 : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ.ಜಿ ಅವರು ಮೇ 26 ರಿಂದ ಮೇ 28 ರವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಳ್ಳುವರು.ಮೇ 26 ರಂದು ಅಧ್ಯಕ್ಷರು ಸಂಜೆ ಬೆಂಗಳೂರಿನಿಂದ ನಿರ್ಗಮಿಸಿ ರಾತ್ರಿ ಬಳ್ಳಾರಿ ತಲುಪಿ ವಾಸ್ತವ್ಯ ಮಾಡುವರು.ಮೇ 27 ರಂದು ಬೆಳಿಗ್ಗೆ 10.30 ಗಂಟೆಗೆ ಸಿರಗುಪ್ಪ ತಾಲ್ಲೂಕಿನ ಸಿರಿಗೇರಿ ಗ್ರಾಮದ ಶಂಭುಲಿಂಗೇಶ್ವರ ದೇವಾಲಯದ ಆವರಣದಲ್ಲಿ ಹಮ್ಮಿಕೊಂಡಿರುವ ಅನ್ನಪೂರ್ಣ ಪ್ರಕಾಶನದ ‘ಪಿ.ಲಂಕೇಶ್ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡುವರು.
ನಂತರ ಮಧ್ಯಾಹ್ನ 03 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಲೆಮಾರಿ ಸಮುದಾಯದ ಸಂಘ ಸಂಸ್ಥೆಗಳಿಂದ ಹಾಗೂ ಸಾಮಾನ್ಯ ಜನರಿಂದ ಕುಂದುಕೊರತೆಗಳ ಅಹವಾಲು ಸ್ವೀಕರಿಸುವರು. ಬಳಿಕ ಮಧ್ಯಾಹ್ನ 03.30 ಗಂಟೆಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಅನುಷ್ಠಾನ ಸಮಿತಿ ಅಧ್ಯಕ್ಷರ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯರು ಹಾಗೂ ಇತರೆ ಇಲಾಖಾ ಅಧಿಕಾರಿಗಳೊಂದಿಗೆ ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರೀಶೀಲನೆ, ಅನುಪಾಲನಾ ವರದಿ ಹಾಗೂ ಜಿಲ್ಲಾಡಳಿತಕ್ಕೆ ನಡೆಸಲಾದ ಪತ್ರ ವ್ಯವಹಾರಗಳ ಕುರಿತು ಸಮಾಲೋಚನೆ ಸಭೆ ನಡೆಸುವರು.
ಸಂಜೆ 5.30 ಗಂಟೆಗೆ ಅದೇ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸುವರು. ಬಳಿಕ ವಾಸ್ತವ್ಯ ಮಾಡುವರು.ಮೇ 28 ರಂದು ಬೆಳಿಗ್ಗೆ 10.30 ಗಂಟೆಗೆ ಬಳ್ಳಾರಿ ನಗರದ 6ನೇ ವಾರ್ಡ್, ಬಂಡಿಮೋಟ್ ತಾಯಮ್ಮಗುಡಿ ಹತ್ತಿರವಿರುವ ಕೊರಚರ ಗೇರಿಯ ಪರಿಶಿಷ್ಟ ಜಾತಿ ಅಲೆಮಾರಿ ಕೊರಚ ಸಮುದಾಯದ ಕುಟುಂಬಗಳು ವಾಸಿಸುವ ಸ್ಥಳಗಳಿಗೆ ಭೇಟಿ ನೀಡಿ, ಸ್ಥಳೀಯ ಸಂಸ್ಥೆಗಳು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.ನಂತರ ಮಧ್ಯಾಹ್ನ 02 ಗಂಟೆಗೆ ಬಳ್ಳಾರಿಯಿಂದ ಬೆಂಗಳೂರಿಗೆ ಪ್ರಯಾಣಿಸುವರು ಎಂದು ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಶಶಿಧರ್ ಎಂ.ಬಿ ಅವರು ತಿಳಿಸಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 