ಕರ್ನಾಟಕ ರಾಜ್ಯ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ-2025
Karnataka State Social and Educational Survey-2025
ಬೆಳಗಾವಿ, ಸೆ.22 : ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸೆಪ್ಟೆಂಬರ್ 22 ರಿಂದ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬೆಳಗಾವಿ ನಗರದ ಧರ್ಮನಾಥ ಭವನ ಹತ್ತಿರದ, ವಡ್ಡರವಾಡಿಯಲ್ಲಿ ಸೋಮವಾರ (ಸೆ.22) ಹಿಂದುಳಿದ ವರ್ಗಗಳ ಆಯೋಗದ ಮಾರ್ಗಸೂಚಿ ಪ್ರಕಾರ ನಡೆಸಲಾಗುತ್ತಿರುವ ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಶಾಸಕ ಆಸೀಫ್ (ರಾಜು) ಸೇಠ್ ಅವರು ಚಾಲನೆ ನೀಡಿದರು.
ವಡ್ಡರವಾಡಿಯ ನಿವಾಸಿ ಮಲ್ಲವ್ವ ಗಾಡಿವಡ್ಡರ ಅವರ ಮನೆಗೆ ಭೇಟಿ ನೀಡಿ, ಕುಟುಂಬದ ಸದಸ್ಯರ ವಿವರ, ಶಿಕ್ಷಣ ಆಧಾರ್ ಸಂಖ್ಯೆ, ವೋಟರ್ ಐಡಿ ಸೇರಿದಂತೆ ಇತರೆ ಮಾಹಿತಿ ಸಂಗ್ರಹಿಸುವ ಮೂಲಕ ಸಮೀಕ್ಷೆ ನಡೆಸಿದರು.
ಇದೇ ವೇಳೆ ಮಾತನಾಡಿ ಅವರು ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಕುಟುಂಬದ ಸಮೀಕ್ಷಾ ಕಾರ್ಯವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಕರು ಹಾಗೂ ಇತರೆ ಇಲಾಖೆಯ ಸರ್ಕಾರಿ ನೌಕರರಿಂದ ಜರುಗಿಸಲಾಗುತ್ತಿದೆ. ಸಾರ್ವಜನಿಕರು ಅಗತ್ಯ ಮಾಹಿಯನ್ನು ನೀಡಿ ಸಹಕರಿಸುವಂತೆ ಎಂದು ಶಾಸಕ ಆಸೀಫ್ (ರಾಜು) ಸೇಠ್ ತಿಳಿಸಿದರು.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಮಾತನಾಡಿ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಮನೆಗಳ ಗುರುತಿಸುವಿಕೆ ಕಾರ್ಯದಲ್ಲಿ ಹೆಸ್ಕಾಂ ಅಧಿಕಾರಿ, ಸಿಬ್ಬಂದಿಗಳ ಕಾರ್ಯಕ್ಕೆಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರತಿಯೊಂದು ಮನೆಗೆ ಪ್ರತ್ಯೇಕ ಗಊಋ ಯನ್ನು ನಿಗದಿ ಮಾಡಲಾಗಿದೆ. ಸಮೀಕ್ಷಾ ಕಾರ್ಯ 16 ದಿನಗೊಳಗೆ ಪೂರ್ಣಗೊಳಿಸಲು ಕಾಲಾವಧಿ ನಿಗದಿಪಡಿಸಲಾಗಿದೆ ಎಂದರು.
ಸಮೀಕ್ಷಾದಾರರಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಸಮೀಕ್ಷಾ ಕಾರ್ಯದಲ್ಲಿ ನೆಟವರ್ಕ ತೊಂದರೆ ಇರುವಂತಹ ಪ್ರದೇಶಗಳಲ್ಲಿ ವಿಶೇಷ ಅಭಿಯಾನದ ಮೂಲಕ ಸಮೀಪದ ಗ್ರಾಮ ಪಂಚಾಯತ ಅಥವಾ ಸರಕಾರಿ ಕಟ್ಟಡಗಳಲ್ಲಿ ಸಮೀಕ್ಷೆ ಜರುಗಿಸಲಾಗುವದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿನವ ಜೈನ್, ಬೆಳಗಾವಿ ಉಪವಿಭಾಗಾಧಿಕಾರಿ ಶ್ರವಣ್ ನಾಯಕ, ತಹಶೀಲ್ದಾರ್ ಬಸವರಾಜ ನಾಗರಾಳ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹರ್ಷ, ತಾಲೂಕಾಧಿಕಾರಿ ಶಾಂತಾ ಮರಿಗೌಡರ, ನಗರ ಸೇವಕರು, ಹಿಂದುಳಿದ ವರ್ಗಗಳ ಇಲಾಖೆ ಸಿಬ್ಬಂದಿಗಳು, ಹೆಸ್ಕಾಂ ಸಿಬ್ಬಂದಿಗಳು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 