ಕರ್ನಾಟಕ ರಾಜ್ಯ ಮಹಿಳಾ ಚೆಸ್ ಚಾಂಪಿಯನ್ಶಿಪ್: ಶ್ರೇಯಾ ರಾಜೇಶ್ ಚಾಂಪಿಯನ್
Karnataka State Women's Chess Championship: Shreya Rajesh is the Champion
ರಾಣೆಬೆನ್ನೂರು 25: ನಗರದ ವಾಣಿ ನಗರದಲ್ಲಿ ಆ.21ರಿಂದ 23ರವರೆಗೆ ಮೂರು ದಿನಗಳ ಕಾಲ ನಡೆದ ಕರ್ನಾಟಕ ರಾಜ್ಯ ಮಹಿಳಾ ಚೆಸ್ ಚಾಂಪಿಯನ್ಶಿಪ್-2026ರಲ್ಲಿ ಬೆಂಗಳೂರು ನಗರ ಜಿಲ್ಲೆಯ ಶ್ರೇಯಾ ರಾಜೇಶ್ 7 ಅಂಕಗಳೊಂದಿಗೆ ಚಾಂಪಿಯನ್ ಆಗಿ ಹೊರಹೊಮ್ಮಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ 50ಕ್ಕೂ ಹೆಚ್ಚು ಮಹಿಳಾ ಚೆಸ್ ಆಟಗಾರ್ತಿಯರು ಚಾಂಪಿಯನ್ಶಿಪ್ನಲ್ಲಿ ಪಾಲ್ಗೊಂಡಿದ್ದರು. ಒಟ್ಟು 1.50 ಲಕ್ಷ ನಗದು ಬಹುಮಾನ ಹಾಗೂ ಆಕರ್ಷಕ ಟ್ರೋಫಿಗಳನ್ನು ಒಳಗೊಂಡಿದ್ದ ಸ್ಪರ್ಧೆಯಲ್ಲಿ ಶ್ರೇಯಾ ರಾಜೇಶ್ 50 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿ ಪಡೆದರು.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅರುಷಿ ಸೆವರಿನ್ ಹೆಲೆನ್ ಡಿ ಸಿಲ್ವಾ 7 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಪಡೆದು ?30 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿಗೆ ಭಾಜನರಾದರು. ಧಾರವಾಡ ಜಿಲ್ಲೆಯ ಸಿಮ್ರಾ ನದಾಫ್ 6 ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು 20 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿ ಪಡೆದರು. ಬೆಂಗಳೂರು ನಗರ ಜಿಲ್ಲೆಯ ಹರ್ಷಿಣಿ ಎ. 6 ಅಂಕಗಳೊಂದಿಗೆ ನಾಲ್ಕನೇ ಸ್ಥಾನ ಪಡೆದು 10 ಸಾವಿರ ನಗದು ಬಹುಮಾನ ಹಾಗೂ ಟ್ರೋಫಿ ಪಡೆದರು.
ಶ್ರೇಯಾ ರಾಜೇಶ್ ಮತ್ತು ಅರುಷಿ ಸೆವರಿನ್ ಹೆಲೆನ್ ಡಿ ಸಿಲ್ವಾ ಇಬ್ಬರೂ ಪಂದ್ಯಾವಳಿಯಲ್ಲಿ ಅಜೇಯರಾಗಿದ್ದರು. ಅತ್ಯುತ್ತಮ ಟೈ-ಬ್ರೇಕ್ ಅಂಕಗಳ ಆಧಾರದ ಮೇಲೆ ಶ್ರೇಯಾ ರಾಜೇಶ್ ಪ್ರಥಮ ಸ್ಥಾನವನ್ನು ತಮ್ಮದಾಗಿಸಿಕೊಂಡರು.
ಈ ಚಾಂಪಿಯನ್ಶಿಪ್ನ ಮೊದಲ ನಾಲ್ಕು ಸ್ಥಾನ ಪಡೆದ ಆಟಗಾರ್ತಿಯರು 2026ರ ನವೆಂಬರ್ನಲ್ಲಿ ತೆಲಂಗಾಣದಲ್ಲಿ ನಡೆಯಲಿರುವ ಮಹಿಳಾ ರಾಷ್ಟ್ರೀಯ ಚೆಸ್ ಚಾಂಪಿಯನ್ಶಿಪ್ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.
ಬಹುಮಾನ ವಿತರಣಾ ಸಮಾರಂಭದಲ್ಲಿ ಡಾ. ಪ್ರವೀಣ ಖನೂರು, ಡಾ. ಶೈಲಶ್ರೀ ಪಿ. ಖನೂರು, ಡಾ. ಅನುರಾಗ್ ಪಿ. ಖನೂರು, ಕೃಷ್ಣ ವಿ. ಶಿಂಧೆ, ಮುಖ್ಯ ತೀಪುಗಾರ ಸಲೀಂ ಬೈಗ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 