ಫೆ.2ಕ್ಕೆ ಕರ್ನಾಟಕ ಯುವ ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವ

ಬೆಂಗಳೂರು,ಜ. 25, ಫಿಲ್ಮಾಹಾಲಿಕ್ ಫೌಂಡೇಶನ್ ನಿಂದ ಕರ್ನಾಟಕ ಯುವ ಅಂತಾರಾಷ್ಟ್ರೀಯ ಕಿರುಚಿತ್ರೋತ್ಸವವನ್ನು ಫೆ.2 ರಂದು‌ ನಯನ ರಂಗಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಫೌಂಡೇಷನ್ ನ ಸಂಸ್ಥಾಪಕ ಆದಿತ್ಯ ಆರ್.ಎ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ತಲೆಮಾರಿನ ಚಲನಚಿತ್ರ ತಯಾರಕರಿಗೆ  ಕಲಾತ್ಮಕ ಸೃಜನಶೀಲತೆಯನ್ನು ಪೋಷಿಸಿ ಮತ್ತು ಉತ್ತೇಜಿಸಿ ಅವರ ಚಲನಚಿತ್ರ ವನ್ನು ದೊಡ್ಡ ಮಟ್ಟದಲ್ಲಿ ಪ್ರದರ್ಶಿಸುವುದು ಚಿತ್ರೋತ್ಸವದ ಉದ್ದೇಶವಾಗಿದೆ ಎಂದರು.ಈ ಉತ್ಸವವು ಸಾರ್ವಜನಿಕರಿಗೆ ಶಿಕ್ಷಣ ನೀಡುವುದು, ಚಲನ ಚಿತ್ರಗಳ ನಿರ್ಮಾಣ ನಿರ್ವಹಣೆ ಕುರಿತು ಮಾಹಿತಿ ನೀಡುವುದು, ಹಿಂಸೆ ತಾರತಮ್ಯ ಮತ್ತು ವರ್ಣಬೇಧ ನೀತಿಯ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವಕರ ಹಕ್ಕುಗಳ ಬಗ್ಗೆ ಮನವರಿಕೆ ಮಾಡಿಕೊಡುವ ಉದ್ದೇಶವನ್ನು ಇದು ಒಳಗೊಂಡಿದೆ ಎಂದು ಅವರು ತಿಳಿಸಿದರು.ಕಾರ್ಯಕ್ರಮದಲ್ಲಿ ಚಿತ್ರ ಕಲಾವಿದರಾದ ಸುಧಾ ಬೆಳವಾಡಿ, ಪ್ರಕಾಶ್ ಬೆಳವಾಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಎಸ್‌.ರಂಗಪ್ಪ, ಚಲನಚಿತ್ರ ನಿರ್ದೇಶಕ ಸತ್ಯ ಪ್ರಕಾಶ್, ಎಚ್.ವಾಸು ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದರು.