ರಾಜ್ಯಪಾಲರನ್ನು ಕರ್ನಾಟಕದಿಂದ ವಾಪಸ್ಸು ಕರೆಸಿಕೊಳ್ಳಬೇಕೆಂದು ರಾಷ್ಟ್ರಪತಿಗಳಿಗೆ ಕರವೇ ಒತ್ತಾಯ
Karve urges the President to recall the Governor from Karnataka
ಲೋಕದರ್ಶನ ವರದಿ
ವಿಜಯಪುರ 08: ವಿಜಯಪುರ ಹಿಂದಿ ಸಾಮ್ರಾಜ್ಯಶಾಹಿಗಳ ಪರವಾಗಿ ವರ್ತಿಸುತ್ತ ಕರ್ನಾಟಕ ವಿರೋಧಿ ಧೋರಣೆ ತಳೆದಿರುವ ರಾಜ್ಯಪಾಲ ಶ್ರೀ ತಾವರ್ ಚಂದ್ ಗೆಹ್ಲೋಟ್ ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಬೇಕೆಂದು ಕರವೇ ಜಿಲ್ಲಾಧ್ಯಕ್ಷ ಎಂ.ಸಿ. ಮುಲ್ಲಾ ಒತ್ತಾಯಿಸಿದರು. ಅವರು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆಯ ಮೂಲಕ ಎಲ್ಲಾ ರಾಜಕೀಯ ಪಕ್ಷಗಳ ಜನಪ್ರತಿನಿಧಿಗಳೇ ಮಾತಾಡಿ, ದ್ವೀಬಾಷಾ ನೀತಿ ಜಾರಿಗೆ ಒತ್ತಾಯಿಸಿ, ಹಿಂದಿ ಹೇರಿಕೆ ನಿಂತರೆ ಉಳಿದ ಭಾಷೆಗಳ ಅಭಿವೃದ್ಧಿ ಸಾಧ್ಯ ಮುಂತಾದ ವಿವಿಧ ಫಲಕ ಪ್ರದರ್ಶನ ಮಾಡುವುದರ ಮೂಲಕ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗಳಿಗೆ ಹಾಗೂ ಕೇಂದ್ರ ಗೃಹ ಮಂತ್ರಿಗಳಿಗೆ ರಾಜ್ಯಪಾಲರನ್ನು ಕರ್ನಾಟಕದಿಂದ ವಾಪಸ್ಸು ಕರೆಸಿಕೊಳ್ಳಬೇಕೆಂದು ಮಾತನಾಡುತ್ತಿದ್ದರು.
ರಾಜ್ಯ ಸರ್ಕಾರವು ಎಸ್.ಎಸ್.ಎಎಲ್.ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದ ನಿರ್ಧಾರವನ್ನು ಮರು ಪರೀಶೀಲಿಸುವಂತೆ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಈ ಪತ್ರದ ಹಿಂದೆ ಕರ್ನಾಟಕದಲ್ಲಿ ಹಿಂದಿ ಹೇರಿಕೆಯನ್ನು ಶಾಶ್ವತವಾಗಿ ನಡೆಸುವ ಹುನ್ನಾರವಿದೆ. ರಾಜ್ಯಪಾಲರು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ಕನ್ನಡಿಗರ ಆಶೋತ್ತರಗಳಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ ಅವರು ಕರ್ನಾಟಕದಲ್ಲಿ ಒಂದೇ ಒಂದು ನಿಮಿಷವೂ ರಾಜ್ಯಪಾಲರಾಗಿ ಉಳಿಯುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ.
ರಾಜ್ಯಪಾಲರು ರಾಜ್ಯದ ದಿನನಿತ್ಯದ ಆಡಳಿತದಲ್ಲಿ ಮೂಗು ತೂರಿಸುವುದು ಅತ್ಯಂತ ಆಕ್ಷೇಪಾರ್ಹವಾದ ಬೆಳವಣಿಗೆಯಾಗಿದೆ. ರಾಜ್ಯ ಸರ್ಕಾರವನ್ನು ಕರ್ನಾಟಕದ ಜನತೆ ಆಯ್ಕೆ ಮಾಡಿದ್ದಾರೆ. ನಾಡಿನ ಜನರ ಬೇಕು, ಬೇಡಗಳನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ಹೀಗಿರುವಾಗ ಸರ್ಕಾರದ ಮುಖ್ಯಸ್ಥರಾಗಿ ಸರ್ಕಾರದ ನಾಡಪರ ಕಾಳಜಿಯ ನಿರ್ಧಾರಗಳನ್ನು ಬೆಂಬಲಿಸುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅವರು ಹಿಂದಿ ಮಾಫಿಯಾ ಪರವಾಗಿ ಕಾರ್ಯ ನಿರ್ವಹಿಸುತ್ತಿರುವಂತೆ ತೋರುತ್ತದೆ. ಹೀಗಾಗಿ ಅವರನ್ನು ಕೇಂದ್ರ ಸರ್ಕಾರ ಕೂಡಲೇ ವಾಪಸ್ ಕರೆಯಿಸಿಕೊಳ್ಳಬೇಕೆಂದು ಕರವೇ ಆಗ್ರಹಿಸಿದರು.
“ಬೆಂಗಳೂರು ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘ” ಎಂಬ ಅನಾಮಧೇಯ ಸಂಘಟನೆಯ ಮನವಿಗೆ ತುರ್ತಾಗಿ ರಾಜ್ಯಪಾಲರು ಪ್ರತಿಕ್ರಿಯಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವುದೇ ಒಂದು ದೊಡ್ಡ ದುಷ್ಟ ಹುನ್ನಾರವಾಗಿದೆ. ಕರ್ನಾಟಕವನ್ನು ವಲಸೆ ಬರುತ್ತಿರುವ ಹಿಂದಿಭಾಷಿಕರಿಗಾಗಿ ‘ಸುರಕ್ಷಿತ ಸ್ವರ್ಗ'ವನ್ನಾಗಿಸುವ ದೂರಗಾಮಿ ಉದ್ದೇಶಗಳು ಹಿಂದಿ ಮಾಫಿಯಾಗೆ ಇದೆ. ಅದರಭಾಗವಾಗಿಯೇ ರಾಜ್ಯಪಾಲರು ಈ ಪತ್ರ ಬರೆದಿದ್ದಾರೆ. ಎಂಬುದು ಸ್ಪಷ್ಟ.
ಕರ್ನಾಟಕದ ಶಿಕ್ಷಣ ನೀತಿಯನ್ನು ರಾಜ್ಯ ಸರ್ಕಾರ ತೀರ್ಮಾನಿಸುತ್ತದೆ. ರಾಜ್ಯ ಸರ್ಕಾರವನ್ನು ಇದಕ್ಕಾಗಿಯೇ ನಾವು ಆಯ್ಕೆ ಮಾಡಿ ಕಳಿಸಿದ್ದೇವೆ. ಇದನ್ನು ಪ್ರಶ್ನಿಸಲು ರಾಜ್ಯಪಾಲರು ಯಾರು? ಅವರಿಗೆ ಸಂವಿಧಾನ ಈ ಅವಕಾಶ ನೀಡಿಲ್ಲ. ಹಿಂದಿ ಮಾಫಿಯಾ ಎಷ್ಟು ಬಲಶಾಲಿಯಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಹುತ್ತದ ಒಳಗೆ ಇನ್ನೆಷ್ಟು ಹಾವುಗಳು ಇವೆಯೋ ಗೊತ್ತಿಲ್ಲ. ಎಲ್ಲವೂ ಹೊರಬರಲಿ ಎಂದು ನಾವು ಕಾಯುತ್ತಿದ್ದೇವೆ.
ರಾಜ್ಯಪಾಲರ ಈ ಪತ್ರವನ್ನು ರಾಜ್ಯ ಸರ್ಕಾರ ಕಸದ ಬುಟ್ಟಿಗೆ ಎಸೆಯಬೇಕು. ಕನ್ನಡಿಗರ ಹಿತದೃಷ್ಟಿಗೆ ವಿರುದ್ಧವಾಗಿ ಯಾರೇ ಏನೇ ಹೇಳಿದರೂ ಅದನ್ನು ರಾಜ್ಯ ಸರ್ಕಾರ ಪರಿಗಣಿಸಬೇಕಿಲ್ಲ. ನಾವು ಹಿಂದೆ ಬ್ರಿಟಿಷ್ ಸಾಮ್ರಾಜ್ಯಶಾಹಿಯ ವಿರುದ್ಧ ಹೋರಾಡಿದ್ದೆವು. ಈಗ ಹಿಂದಿ ಸಾಮ್ರಾಜ್ಯಶಾಹಿ ನಮ್ಮನ್ನು ಆಳಲು ಯತ್ನಿಸುತ್ತಿದೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ನಮ್ಮ ಪ್ರಾಣ ಹೋದರೂ ನಮ್ಮ ನೆಲದ ಅಸ್ಮಿತೆಯನ್ನು ಉಳಿಸಿಕೊಳ್ಳುತ್ತೇವೆ. ತೃತೀಯ ಭಾಷೆ ಗ್ರೇಡಿಂಗ್ ವ್ಯವಸ್ಥೆಯ ನಿರ್ಧಾರ ಸರ್ಕಾರ ಕೈಗೊಂಡಿದೆ. ಇದನ್ನು ಬದಲಿಸುವ ಪ್ರಯತ್ನ ಯಾರೇ ಮಾಡಿದರೂ ರಕ್ತಕ್ರಾಂತಿಯಾಗುತ್ತದೆ ಎಂದು ಆಕ್ರೋಶವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಅಶೋಕ ಹಾರಿವಾಳ ಮಾತನಾಡಿ,
ರಾಜ್ಯಪಾಲ ಗೆಹ್ಲೋಟ್ ಹಿಂದಿ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಅಲ್ಲೆಲ್ಲಾ ತೃತೀಯ ಭಾಷೆಯಾಗಿ ಕನ್ನಡ ಕಲಿಸಲು ತಾಕೀತು ಮಾಡಲಿ. ಅಷ್ಟೇಕೆ ಅವರ ಸ್ವಂತ ರಾಜ್ಯವಾದ ಮಧ್ಯಪ್ರದೇಶದಲ್ಲಿ ಈಗಲೂ ಎರಡೇ ಭಾಷೆಗಳನ್ನು ಕಲಿಸಲಾಗುತ್ತಿದೆ. ಮೂರನೇ ಭಾಷೆಯನ್ನಾಗಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಲಿನ ಸರ್ಕಾರದ ಮೇಲೆ ಅವರು ಒತ್ತಡ ಹೇರಲಿ. ಅದು ಸಾಧ್ಯವಿಲ್ಲದಿದ್ದರೆ ಕನ್ನಡಿಗರ ಮೇಲೆ ಯಾಕೆ ಹಿಂದಿ ಹೇರಲು ಯತ್ನಿಸುತ್ತಾರೆ. ಇಂಥ ನಾಡದ್ರೋಹಿ ರಾಜ್ಯಪಾಲ ಕರ್ನಾಟಕದಲ್ಲಿ ಇರಲು ಯೋಗ್ಯರಲ್ಲ. ಅವರನ್ನು ಕೇಂದ್ರ ಸರ್ಕಾರ ಕೂಡಲೇ ಹಿಂದಕ್ಕೆ ಕರೆಯಿಸಿಕೊಳ್ಳಲು ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಹಾದೇವ ರಾವಜಿ, ಶ್ರೀಮತಿ ಅನುರಾಧ ಕಲಾಲ, ಫಯಾಜ ಕಲಾದಗಿ, ದಯಾನಂದ ಸಾವಳಗಿ, ಮಹಾದೇವ ಬನಸೋಡೆ, ವಿನೋದ ದಳವಾಯಿ, ಮನೋಹರ ತಾಜವ, ರಾಜು ಹಜೇರಿ, ಬಸವರಾಜ ಕಾತ್ರಾಳ, ಎಸ್.ಎಮ್. ಅಗಸಿಮನಿ, ಕಸ್ತೂರಿ ಪೂಜಾರಿ, ಎಚ್ ಎಸ್ ಕಬಾಡೆ, ಶ್ರೀಕಾಂತ ಬಿಜಾಪುರ, ಮುತ್ತು ಹಿಪ್ಪರಗಿ, ರವಿ ಮುರಗೋಡ, ಜಯಶ್ರೀ ಕಾಶೆಟ್ಟಿ, ಬಸವರಾಜ ಜಂಗಶೆಟ್ಟಿ, ಗಣೇಶ ಸಜ್ಜನ, ಶಿವಾನಂದ ಮಾಸ್ತಿ, ಪ್ರೇಮಾ ಶಿಂಗೆ, ಲಕ್ಷ್ಮೀಬಾಯಿ ಬಳ್ಳಾರಿ, ರೇಣುಕಾ ಪನಾಳಕರ, ಬಸವರಾಜ ಹಳ್ಳಿ, ರವಿಕುಮಾರ ಹೂಗಾರ, ಸಿದ್ದಯ್ಯ ಹಿರೇಮಠ, ಮೋಹನಕುಮಾರ ಕಾಪಸೆ, ಮುತ್ತು ಹಿಪ್ಪರಗಿ, ವಿಜಯಕುಮಾರ ಯಂಭತ್ನಾಳ, ಪ್ರಕಾಶ ಡೋಣೂರ, ಪ್ರವೀಣ ತಳವಾರ, ಹಣಮಂತ ಟಕ್ಕಳಕಿ, ಕೆ.ಕೆ. ಬೆನ್ನಟ್ಟಿ, ಆಶೀಪ್ ಪುಂಗಿವಾಲೆ, ಶಮೀರ ಚಂಡರಖಕಿ, ಕನಕಮೂರ್ತಿ, ಉಮೇಶ, ಬಾಲಕೃಷ್ಣಾ ಭೋಸಲೆ, ಅಮೋಘಸಿದ್ದ ದಾಳೆ, ಎ.ಎಮ.ಮಮದಾಪೂರ, ಸುನೀಲ ತಳವಾರ, ತಾಜುದ್ದೀನ ಖಲಿಪಾ, ಭರತ ಗಾಯಕವಾಡ, ನಂದೀಶ ಹಂಗರಗಿ, ಸುರೇಶ ಬೇವಿನಗಿಡದ, ರವಿ ನಾಗಠಾಣ , ಮುಂತಾದವರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 