ಕಾರವಾರ: ಚುನಾವಣಾ ಆಯೋಗದ ಆಯುಕ್ತರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
Karwar: Congress protests against Election Commission Commissioner
ಕಾರವಾರ, 28: ಮುಖ್ಯ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಕಾರವಾರದ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು.
ಜಿಲ್ಲಾ ಕಾಂಗ್ರೆಸ್ನ ನೂತನ ಅಧ್ಯಕ್ಷ ಹಾಗೂ ವಕೀಲ ಜಿ.ಟಿ. ನಾಯ್ಕ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಿ ಬಂಧಿಸಬೇಕು ಎಂದು ಆಗ್ರಹಿಸಲಾಯಿತು.
ಪ್ರತಿಭಟನಾಕಾರರು ಕಾರವಾರದಲ್ಲಿ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿ ಹಾಗೂ ಗಡಿಪಾರು ಅಮಿತ್ ಶಾ ಅವರ ಪ್ರತಿಕೃತಿಗಳನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ. ನಾಯ್ಕ್, ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಆಯುಕ್ತರನ್ನು ಆಯ್ಕೆ ಮಾಡುವಾಗ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿಯನ್ನು ಆಯ್ಕೆ ಸಮಿತಿಯಿಂದ ಹೊರಗಿಟ್ಟಿದೆ ಎಂದು ಆರೋಪಿಸಿದರು. ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕ್ರಮ ಕೈಗೊಳ್ಳಲು ಅನುಕೂಲವಾಗುವಂತೆ ನಿಯಮಗಳನ್ನು ತಿದ್ದುಪಡಿ ಮಾಡಲಾಗಿದೆ ಎಂದು ಅವರು ದೂರಿದರು.
ಚುನಾವಣಾ ಆಯೋಗದ ನಿರ್ಧಾರಗಳನ್ನು ಪ್ರಶ್ನಿಸಿದರೆ ಶಿಕ್ಷೆಯಾಗದಂತೆ ಕಾನೂನು ತಿದ್ದುಪಡಿ ಮಾಡಿರುವುದು, ಚುನಾವಣಾ ಆಯುಕ್ತರನ್ನು ಕೇಂದ್ರ ಸರ್ಕಾರದ ಪ್ರಭಾವಕ್ಕೆ ಒಳಪಡಿಸುವ ಉದ್ದೇಶ ಹೊಂದಿದೆ ಎಂದು ಅವರು ಆರೋಪಿಸಿದರು. ಈ ಕುರಿತು ಎಐಸಿಸಿ ಹಾಗೂ ಕೆಪಿಸಿಸಿ ಸೂಚನೆಯಂತೆ ಕಾರವಾರದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ ಎಂದು ತಿಳಿಸಿದರು.
ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಷ್ಟ್ರಪತಿಗಳಿಗೆ ಲಿಖಿತ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾ ಅವರ ಮೂಲಕ ಮನವಿಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುವುದು ಎಂದು ಅವರು ಹೇಳಿದರು.
ಜ್ಞಾನೇಶ್ ಕುಮಾರ್ ಅವರು ಎಸ್‌ಐಆರ್ ಮೂಲಕ ಅರ್ಹ ಮತದಾರರು ತಮ್ಮ ಹಕ್ಕಿಗಾಗಿ ಪರಿತಪಿಸುವಂತಹ ಪರಿಸ್ಥಿತಿ ನಿರ್ಮಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದರು. ಚುನಾವಣಾ ಆಯೋಗದ ಇತರ ಸದಸ್ಯರು ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿಲ್ಲ ಎಂದೂ ಅವರು ಹೇಳಿದರು.
ಶಾಸಕ ಸತೀಶ್ ಸೈಲ್ ಮಾತನಾಡಿ, ಚುನಾವಣಾ ಆಯೋಗ ತಪ್ಪು ಮಾಡಿದ್ದು, ಇದಕ್ಕೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು. ಬಿಜೆಪಿ ಶಾಸಕ ಹಾಗೂ ಹಾಲಿ ಕಾಂಗ್ರೆಸ್ ಬೆಂಬಲಿತ ಶಾಸಕ ಶಿವರಾಮ ಹೆಬ್ಬಾರ್ ಕೂಡ ಪ್ರತಿಭಟನೆಯಲ್ಲಿ ಮಾತನಾಡಿ, ಬಿಜೆಪಿ ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಶಂಭು ಶೆಟ್ಟಿ, ಕೆಪಿಸಿಸಿ ಪದಾಧಿಕಾರಿಗಳು, ಮಹಿಳಾ ಕಾಂಗ್ರೆಸ್ನ ಸುಜಾತಾ ಗಾಂವ್ಕರ್ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ 