9.80 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಕಾರವಾರ ಸರ್ಕ್ಯೂಟ್ ಹೌಸ್ ಕಟ್ಟಡ ಉದ್ಘಾಟನೆ
Karwar Circuit House building constructed at a cost of Rs. 9.80 crores inaugurated
ಕಾರವಾರ 28 : 9.80 ಕೋಟಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕಾರವಾರದಲ್ಲಿ ನಿರ್ಮಿಸಿದ ನೂತನ ಸರ್ಕೀಟ್ ಹೌಸ್ ಕಟ್ಟಡ ಗುರುವಾರ ಉದ್ಘಾಟನೆಯಾಗಲಿದೆ. ನೂ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಬೆಳಗ್ಗೆ 10.30 ಗಂಟೆಗೆ ಪ್ರವಾಸಿ ಮಂದಿರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ನೂತನ ಸರ್ಕೀಟ್ ಹೌಸನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಉದ್ಘಾಟಿಸಲಿದ್ದಾರೆ.
ಶಾಸಕ ಸತೀಶ ಕೆ. ಸೈಲ್ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವ ಸತೀಶ ಜಾಕಿರಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಕೆ. ಶೆಟ್ಟಿ, ಭೀಮಣ್ಣ ಟಿ. ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಡಿ.ಉಳ್ವೇಕರ ಹಾಗೂ ನಗರ ಸಭೆ ಅಧ್ಯಕ್ಷ ರವಿರಾಜ ಚಂದ್ರಹಾಸ ಅಂಕೋಲೆಕರ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು 