ಕಾಶ್ಮೀರ ವಿವಾದವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ: ಭೋವಿ
ಲೋಕದರ್ಶನವರದಿ
ಹಾವೇರಿ 16: ಗಡಿ, ದೇಶ ಹಾಗೂ ರಾಜ್ಯದಲ್ಲಿನಯಾವುದೇ ಸಮಸ್ಯೆಗಳನ್ನು ಪರಿಹರಿಸಲು ಹಿಂಸಾಚಾರವೇ ಮಾರ್ಗವಲ್ಲ. ಕಾಶ್ಮೀರ ವಿವಾದವನ್ನು ಪಾಕಿಸ್ತಾನ ಸಹಿತ ವಿದೇಶಿ ಶಕ್ತಿಗಳು ತಮ್ಮ ಹಿತಾಸಕ್ತಿಗಳ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವುದು ವಿವಾದವನ್ನು ಈ ದಾಳಿಯಲ್ಲಿ ಎದ್ದು ಕಾಣುತ್ತಿದೆ.
ಕಾಶ್ಮೀರದಲ್ಲಿ ಶಾಂತಿ ನೆಲೆಸಲು ಸಂಬಂಧಿಸಿದ ಎಲ್ಲ ಸರಕಾರಗಳನ್ನೊಳಗೊಂಡು ಗಂಭೀರ ರಾಜ ತಾಂತ್ರಿಕ ಪ್ರಕ್ರಿಯೆಯನ್ನು ಆರಂಭಿಸುವುದಾಗಿ ಮೂರು ವರ್ಷಗಳ ಹಿಂದೆಯೇ ಮೋದಿ ನೇತೃತ್ವದ ಕೇಂದ್ರ ಸರಕಾರ ಭರವಸೆ ನೀಡಿತ್ತು ಎಂದು ಬಸವರಾಜ ಭೋವಿ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್ಪಿಎಫ್ ಯೋಧರ ವಾಹನಗಳ ಮೇಲೆ ಭಯೋತ್ಪಾದಕರು ದಾಳಿಯನ್ನು ನಡೆಸಿ 50 ಕ್ಕೂ ಹೆಚ್ಚು ಸೈನಿಕರನ್ನು ಬಲಿ ಪಡೆದ ಭಯೋತ್ಪಾದಕ ಕೃತ್ಯವನ್ನು ಖಂಡಸಿ ಭಾರತ ವಿದ್ಯಾಥರ್ಿ ಫೆಡರೇಷನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿ ಹಾಗೂ ಪ್ರಗತಿಪರರು ನಗರದ ಮೈಲಾರ ಮಹದೇವಪ್ಪ ಪ್ರತಿಮೆಯ ಮುಂದೆ ಮೇಣದಬತ್ತಿ ಹಂಚುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಾಹಿತಿ ಸತೀಶ ಕುಲಕಣರ್ಿ ಮಾತನಾಡಿ ಜಮ್ಮು ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ, ಸಾಮಾನ್ಯ ಜನರ ಜೀವನ ಅಸ್ತವ್ಯಸ್ತಗೊಳ್ಳದಂತೆ ಕ್ರಮ ಕೈಗೊಳ್ಳುವ ಪ್ರಮುಖ ಜವಾಬ್ದಾರಿ ಕೇಂದ್ರ ಸರಕಾರದ ಮೇಲಿದ್ದು, ಅದನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಕೇಂದ್ರ ಸರಕಾರಕ್ಕೆ ಆಗ್ರಹಿಸಿದರು.
ಪ್ರತಿಪರ ಮುಖಂಡರಾದ ಎಚ್.ವೈ ಮಾಡಳ್ಳಿ ಮಾತನಾಡಿ ಕರ್ತವ್ಯದ ಸಂಧರ್ಭದಲ್ಲೇ ಉಗ್ರರ ದಾಳಿಗೆ ಬಲಿಯಾಗಿ ತಮ್ಮ ಅಮೂಲ್ಯ ಪ್ರಾಣವನ್ನು ಕಳೆದುಕೊಂಡ ಸೈನಿಕರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಗುತ್ತಿದೆ.
ವಕೀಲ ಜಿ.ಎ ಹಿರೇಮಠ.ಕವಿಗಳಾದ ಬಸವರಾಜ, ರಾಜೇಂದ್ರ ಬಾಬು ಜೋಶೆಟ್ಟಿ. ಮಹಾಂತೇಶ ಎಲ್.ಕೆ.ಸುನೀಲ ನಾಯ್ಕ, ಯುವರಾಜ ಲಮಾಣಿ, ಫಕ್ಕಿರೇಶ ಎಸ್,ಎಚ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 