ಕಸ್ತೂರಿ ರಂಗನ್ ವರದಿ: ಆಕ್ಷೇಪಣೆ ಸಲ್ಲಿಸಲು 60 ದಿನ ಕಾಲಾವಕಾಶ
Kasturirangan Report: 60-day window to submit objections
ಕಾರವಾರ ಸೆ.9: ಕೇಂದ್ರ ಪರಿಸರ ಇಲಾಖೆ ಕಸ್ತೂರಿ ರಂಗನ್ ವರದಿಗೆ ಸಂಬಂಧಿಸಿದಂತೆ 7ನೇ ಅಧಿಸೂಚನೆ ಪ್ರಕಟಿಸಿ, ಸಾರ್ವಜನಿಕರು ಅಭಿಪ್ರಾಯ ಹಾಗೂ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಿದೆ.
ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ತುರ್ತು ಗ್ರಾಮಸಭೆ ಕರೆದು ಜನಾಭಿಪ್ರಾಯ ಸಂಗ್ರಹಿಸಬೇಕು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಆಗ್ರಹಿಸಿದೆ.
ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದ ನಿಯೋಗ ಬುಧವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರನ್ನು ಭೇಟಿಯಾಗಿ, ಕಸ್ತೂರಿ ರಂಗನ್ ವರದಿ ಜನರಿಗೆ ಅಪಾಯಕಾರಿಯಾಗಿದ್ದು, ಸೂಕ್ಷ್ಮ ಪ್ರದೇಶವೆಂದು ಘೋಷಿಸಲಾದ ಕ್ಷೇತ್ರದಲ್ಲಿ ಜನಸಾಮಾನ್ಯರ ಮೇಲಾಗುವ ಪರಿಣಾಮಗಳ ಕುರಿತು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸಮಗ್ರ ವರದಿ ಕಳುಹಿಸುವಂತೆ ಮನವಿ ಸಲ್ಲಿಸಿತು.
ಸೂಕ್ಷ್ಮ ಪ್ರದೇಶವೆಂದು ಘೋಷಿಸಲಾದ ಕ್ಷೇತ್ರದಲ್ಲಿ ಜನರ ಮೇಲೆ ಉಂಟಾಗುವ ಪರಿಣಾಮಗಳ ಕುರಿತು ಸಮಗ್ರ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. ನಿಯೋಗದಲ್ಲಿ ರಾಜೇಶ್ ಮಿತ್ರ ನಾಯ್ಕ, ಮಂಜುನಾಥ ಮರಾಠಿ, ಮಾದೇವ ನಾಯ್ಕ, ವಿಜು ಪಿಳ್ಳೆ, ಉದಯ ಗುನಗಾ, ಶಂಕರ ನಾಯ್ಕ, ಸಂದೇಶ ನಾಯ್ಕ ಸೇರಿದಂತೆ ಹಲವರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 