ಇಂದಿ ಶಾಸಕ ಮೌನಕ್ಕೆ ಕಾಸುಗೌಡ ಬಿರಾದಾರ್ ಟೀಕೆ
Kasugowda Biradar criticizes Indian MLA's silence
ಇಂಡಿ 28: ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಸಚಿವ ಸ್ಥಾನ ಸಿಗದೆ ರಾಜೀನಾಮೆ ನೀಡಿದ ಬಳಿಕ, ಕಾರ್ಯಕರ್ತರ ಒತ್ತಾಸೆಯ ಮೇರೆಗೆ ರಾಜೀನಾಮೆ ಹಿಂಪಡೆಯುವುದಾಗಿ ಹೇಳಿದ್ದರು. ಆದರೆ ಇದೀಗ ಇಂಡಿ ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಹೊರಗುಳಿದಿದ್ದರೂ ಮೌನವಾಗಿರುವುದು ಏಕೆ ಎಂದು ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ್ ಪ್ರಶ್ನಿಸಿದ್ದಾರೆ.
ಇಂಡಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪ್ರಕಟಿಸಿರುವ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಇಂಡಿ ತಾಲೂಕು ಸೇರೆ್ಡಯಾಗದಿರುವುದು ಸಾವಿರಾರು ರೈತ ಕುಟುಂಬಗಳಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಹೊಲಗಳಲ್ಲಿ ಬೆಳೆಗಳು ಒಣಗುತ್ತಿದ್ದು, ಬಿತ್ತಿದ ಬೀಜ ಮಣ್ಣಿನಲ್ಲಿ ಕರಗಿದೆ. ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ ಎಂದು ಹೇಳಿದರು.
ಇಂಡಿ ತಾಲೂಕಿನ ಬಹುತೇಕ ರೈತರು ಮಳೆ ಆಧಾರಿತ ಕೃಷಿಯನ್ನೇ ಅವಲಂಬಿಸಿದ್ದು, ಮಳೆ ಕೈಕೊಟ್ಟಾಗ ಅವರ ಬದುಕು ಅಸ್ತವ್ಯಸ್ತವಾಗುತ್ತದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಕ್ಷೇತ್ರದ ಶಾಸಕರು ಹಾಗೂ ಅಧಿಕಾರಿಗಳು ಸರ್ಕಾರಕ್ಕೆ ವಾಸ್ತವ ಸ್ಥಿತಿಯ ವರದಿ ಸಲ್ಲಿಸಿದ್ದಾರೆಯೇ, ರೈತರ ಸಮಸ್ಯೆಯನ್ನು ಸಮರ್ಥವಾಗಿ ಸರ್ಕಾರದ ಮುಂದೆ ಮಂಡಿಸಿದ್ದಾರೆಯೇ ಎಂದು ಅವರು ಪ್ರಶ್ನಿಸಿದರು.
ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿದ್ದರೆ ರೈತರಿಗೆ ಬೆಳೆಹಾನಿ ಪರಿಹಾರ, ಸಾಲ ಮರುಪಾವತಿ ಸಡಿಲಿಕೆ ಹಾಗೂ ವಿವಿಧ ಸರ್ಕಾರಿ ನೆರವುಗಳು ದೊರೆಯುತ್ತಿದ್ದವು. ಆದ್ದರಿಂದ ಸರ್ಕಾರ ಕೂಡಲೇ ಇಂಡಿ ತಾಲೂಕಿನ ವಾಸ್ತವ ಪರಿಸ್ಥಿತಿಯನ್ನು ಮರುಪರೀಶೀಲಿಸಿ ಬರಪೀಡಿತ ಪಟ್ಟಿಗೆ ಸೇರೆ್ಡ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ರೈತರೊಂದಿಗೆ ಸೇರಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕಾಸುಗೌಡ ಬಿರಾದಾರ್ ಎಚ್ಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 