ಕವಿತಾ ಕೊಣ್ಣೂರಿಗೆ ಅಂತರರಾಷ್ಟ್ರೀಯ ಗೌರವ ಡಾಕ್ಟರೇಟ್
Kavita Konnoor awarded international honorary doctorate
ಲೋಕದರ್ಶನ ವರದಿ
ಗದಗ, 12: ಆರ್ಟ್ ವರ್ಕ್ ಮೂಲಕ ನೂರಾರು ಹೆಣ್ಣು ಮಕ್ಕಳ ಬದುಕಿಗೆ ದಾರೀದೀಪವಾಗಿರುವ ನಗರದ ಭಾರ್ಗವಿ ಮಹಿಳಾ ಫೌಂಡೇಶನ್ ಸಂಸ್ಥಾಪಕಿ ಕವಿತಾ ಕೊಣ್ಣೂರ ಅವರಿಗೆ ಇತ್ತೀಚೆಗೆ ಮಲೇಷ್ಯಾದಲ್ಲಿ ನಡೆದ ವಲ್ಡ್ ಫ್ಯಾಷನ್ ಸಮಿಟ್-2026 ನಲ್ಲಿ ವಲ್ಡ್ ಫ್ಯಾಷನ್ ಯುನಿವರ್ಸಿಟಿ ವತಿಯಿಂದ ಗೌರವ ಡಾಕ್ಟರೇಟ್ ನೀಡಿ ಸನ್ಮಾನಿಸಲಾಗಿದೆ. ಕವಿತಾ ಕೊಣ್ಣೂರ ಅವರ ಈ ಸಾಧನೆ ರಾಜ್ಯಕ್ಕೆ ಹೆಮ್ಮೆಯ ವಿಷಯವಾಗಿದೆ. ಆರ್ಟ್ ವರ್ಕ್ ಮೂಲಕ ಮಹಿಳೆಯರಿಗೆ ಸ್ವಾವಲಂಬಿ ಜೀವನ ಕಟ್ಟಿಕೊಳ್ಳುವ ಮಾರ್ಗದರ್ಶನ ನೀಡುವುದರ ಜೊತೆಗೆ, ಸಂಕಷ್ಟದಲ್ಲಿರುವ ಹೆಣ್ಣು ಮಕ್ಕಳಿಗೆ ಸಹ ಅಕ್ಕನ ಸ್ಥಾನದಲ್ಲಿ ನಿಂತು ನೆರವಾಗುತ್ತಿದ್ದಾರೆ. ಕಲಾ ಕ್ಷೇತ್ರದ ಜೊತೆಗೆ ವಿವಿಧ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅವರ ಸೇವೆಯನ್ನು ಗುರುತಿಸಿ ಈ ಅಂತರರಾಷ್ಟ್ರೀಯ ಗೌರವ ಪ್ರದಾನಿಸಲಾಗಿದೆ.
ಮಲೇಷ್ಯಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ಗಣ್ಯರು, ಸಮಾಜಸೇವಕರು ಹಾಗೂ ವಿವಿಧ ಕ್ಷೇತ್ರಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಕವಿತಾ ಕೊಣ್ಣೂರ, “ಈ ಸಾಧನೆ ನನ್ನೊಬ್ಬಳದ್ದಲ್ಲ. ನನ್ನ ಪತಿ, ಮಕ್ಕಳು, ಕುಟುಂಬದವರು, ಸ್ನೇಹಿತರು, ಗುರುಗಳು ಹಾಗೂ ಹಿತೈಷಿಗಳ ಬೆಂಬಲವೇ ಇದಕ್ಕೆ ಕಾರಣ. ಈ ಗೌರವ ಸಮಾಜಸೇವೆಯಲ್ಲಿ ಇನ್ನಷ್ಟು ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸಲು ಪ್ರೇರಣೆ ನೀಡಿದೆ” ಎಂದು ಹೇಳಿದರು. ಕವಿತಾ ಅವರ ಈ ಸಾಧನೆಗೆ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳು, ಸಮಾಜಮುಖಿ ಸಂಘಟನೆಗಳು ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 