ತಾಳಿಕೋಟಿ 17: ತಾಲೂಕಿನ ಫತ್ತೇಪುರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಹ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಪಟ್ಟಣದ ಯುವ ಕವಿ ರಾಹುಲ್ ರಜಪೂತ ಇವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ ಇವರು ಕೊಡ ಮಾಡುವ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ-2025 ರ ಕಾವ್ಯಶ್ರೀ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಗಿದೆ.
ಸಂಘದ 5ನೇ ವಷಾಚರಣೆ ಸವಿನೆನಪಿಗಾಗಿ ಶಿವಮೊಗ್ಗ ನಗರದಲ್ಲಿ ದಿ. 16ರಂದು ನಡೆದ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ರಾಹುಲ್ ರಜಪೂತ ಅವರಿಗೆ ಅವರು ರಚಿಸಿದ ಅತ್ಯುತ್ತಮ ಕವನಕ್ಕಾಗಿ ಈ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗಿದೆ. ಕರ್ನಾಟಕ ರಾಜ್ಯ ಬರಹಗಾರರ ಸಂಘದ ಸಂಸ್ಥಾಪಕ ಅಧ್ಯಕ್ಷ ಮಧು ನಾಯಕ್, ಶಿವಮೊಗ್ಗ ಜಿಲ್ಲಾಧ್ಯಕ್ಷ ರಾಮು ಎನ್. ರಾಥೋಡ(ಮಸ್ಕಿ) ಹಾಗೂ ಹಲವಾರು ಗಣ್ಯರು ಇದ್ದರು.