ಸಮಸಮಾಜ ಕಟ್ಟುವಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಸಂತೋಷ ಬಂಡೆ

Kayaka Saran's contribution in building an egalitarian society is immense: Santhosh Bande

ಇಂಡಿ 10: ಮೂಢನಂಬಿಕೆಗಳು, ಜಾತಿ ಪದ್ಧತಿ, ಅಸಮಾನತೆಯ ವಿರುದ್ಧ ವಚನಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿ, ಸಮಸಮಾಜ ಕಟ್ಟುವಲ್ಲಿ ಕಾಯಕ ನಿಷ್ಠೆ ಮೆರೆದ ಕಾಯಕ ಶರಣರ ಕೊಡುಗೆ ಅಪಾರ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು. 

ಸೋಮವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಯ ವತಿಯಿಂದ ಹಮ್ಮಿಕೊಂಡ ಕಾಯಕ ಶರಣರ ಜಯಂತಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.  

ಕಾಯಕ ಶರಣರ ವಚನಗಳೇ ನಮ್ಮೆಲ್ಲರ ಬದುಕಿಗೆ ಸಂವಿಧಾನವಾಗಿದೆ. ಐವರು ಕೂಡ ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಸರಳ ಜೀವನ, ಶುದ್ಧ ಧ್ಯಾನ, ನಿಷ್ಕಲ್ಮಶ ಭಕ್ತಿ ಮಾರ್ಗದಿಂದ ಮುಕ್ತಿ ಸಾಧ್ಯವೆಂದು ಸಾರಿದ ಕಾಯಕ ಶರಣರ ವಚನಗಳು ಇಂದಿಗೂ ಪ್ರಸ್ತುತ ಎಂದರು.ಮುಖ್ಯ ಶಿಕ್ಷಕ ಅನಿಲ ಪತಂಗಿ ಮಾತನಾಡಿ, ಕಾಯಕ ಶರಣರಾದ ಮಾದಾರ ಚನ್ನಯ್ಯ, ಮಾದರ ಧೂಳಯ್ಯ, ಢೋಹರ ಕಕ್ಕಯ್ಯ, ಸಮಗಾರ ಹರಳಯ್ಯ ಹಾಗೂ ಉರಿಲಿಂಗ ಪೆದ್ದಿ ಅವರು ತಮ್ಮ ಕಾಯಕದಿಂದ ಗುರುತಿಸಿಕೊಂಡು, ಕಾಯಕದ ಮೇಲೆ ಜಾತಿ ಮಾಡಬಾರದು ಎಂದು ಸಾರಿದ್ದಾರೆ ಎಂದು ಅಭಿಪ್ರಾಯಪಟ್ಟರು. 

ಮುಖ್ಯ ಶಿಕ್ಷಕರಾದ ಎಸ್ ಎಸ್ ಅರಬ, ವ್ಹಿ ವೈ ಪತ್ತಾರ ಹಾಗೂ ಶಿಕ್ಷಕರಾದ ಎಸ್ ಎಂ ಪಂಚಮುಖಿ, ಶಾಂತೇಶ ಹಳಗುಣಕಿ, ಮಲ್ಲಮ್ಮ ಗಿರಣಿವಡ್ಡರ, ಜೆ ಸಿ ಗುಣಕಿ, ಸಾವಿತ್ರಿ ಸಂಗಮದ, ಎಫ್ ಎ ಹೊರ್ತಿ, ಎಸ್ ವ್ಹಿ ಬೆನೂರ, ಎಸ್ ಬಿ ಕುಲಕರ್ಣಿ, ಎಸ್ ಡಿ ಬಿರಾದಾರ, ಸುಮಿತ್ರಾ ನಂದಗೊಂಡ, ಸುರೇಶ ದೊಡ್ಯಾಳಕರ, ಶ್ರದ್ಧಾ ಬಂಕಲಗಾ, ಅಲ್ಫಿಯಾ ಅಂಗಡಿ ಸೇರಿದಂತೆ ಶಾಲಾ ಮಕ್ಕಳು ಉಪಸ್ಥಿತರಿದ್ದರು.