ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಕೆಂಪೇಗೌಡ ಜಯಂತಿ ಆಚರಣೆ
Kempegowda Jayanti celebrated at Akkamahadevi Women's University
ಲೋಕದರ್ಶನ ವರದಿ
ವಿಜಯಪುರ 29: ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯ ಆಡಳಿತಗಾರರಾಗಿ ಸಮಾಜಮುಖಿ ಕಾರ್ಯಗಳ ಮೂಲಕ ಇತಿಹಾಸದಲ್ಲಿ ಅಚ್ಚಳಿಯದ ಹೆಜ್ಜೆ ಗುರುತು ಮೂಡಿಸಿದ್ದು, ಅವರ ಆದರ್ಶಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿವೆ ಎಂದು ಪ್ರೊ. ಮಹೇಶ ಚಿಂತಾಮಣಿ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸ್ನಾತಕ ಅಧ್ಯಯನ ವಿಭಾಗದಲ್ಲಿ ಶನಿವಾರ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೆಂಪೇಗೌಡರ ಜೀವನ, ಸಾಧನೆ, ಆಡಳಿತ ವೈಖರಿ ಹಾಗೂ ಜನಪರ ದೃಷ್ಟಿಕೋನವನ್ನು ವಿವರಿಸಿದ ಅವರು, ಅವರ ಆದರ್ಶಗಳು ಮತ್ತು ಮೌಲ್ಯಗಳು ಇಂದಿನ ಯುವಜನತೆಗೆ ದಾರೀದೀಪವಾಗಿದ್ದು, ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಪ್ರೊ. ಶ್ರೀನಿವಾಸ, ಡಾ. ಚಂದ್ರಶೇಖರ ಮಠಪತಿ, ಡಾ. ಜಿ. ಸೌಭಾಗ್ಯ ಹಾಗೂ ಸ್ನಾತಕ ಅಧ್ಯಯನ ವಿಭಾಗದ ಬೋಧಕ-ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 