ಕೇರಳ "ಮಿನಿ-ಪಾಕಿಸ್ತಾನ", ಅದಕ್ಕಾಗಿಯೇ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಅಲ್ಲಿಂದ ಆಯ್ಕೆ: ಸಚಿವ ನಿತೇಶ್ ರಾಣೆ ವಿವಾದಾತ್ಮಕ ಹೇಳಿಕೆ

Kerala 'mini-Pakistan', why Rahul Gandhi, Priyanka Gandhi elected from there: Minister Nitesh Rane

ಪುಣೆ 30: ಮಹಾರಾಷ್ಟ್ರದ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಕೇರಳ "ಮಿನಿ-ಪಾಕಿಸ್ತಾನ". ಅದಕ್ಕೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಗೆಲ್ಲಿಸಲಾಗಿದೆ ಎಂದು ಬಿಜೆಪಿ ನಾಯಕ ರಾಣೆ ಹೇಳಿದ್ದಾರೆ.

ಕೇರಳ ಮಿನಿ ಪಾಕಿಸ್ತಾನವಾಗಿದೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅಲ್ಲಿಂದ ಆಯ್ಕೆಯಾಗಿದ್ದಾರೆ. ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇದು ಸತ್ಯ. ಇವರೆಲ್ಲಾ ಭಯೋತ್ಪಾದಕರ ನೆರವಿನಿಂದ ಸಂಸದರಾಗಿದ್ದಾರೆ ಎಂದು ರಾಣೆ ಹೇಳಿದ್ದಾರೆ.

ಪುಣೆ ಜಿಲ್ಲೆಯ ಪುರಂದರ ತಾಲೂಕಿನಲ್ಲಿ ಅಫ್ಜಲ್ ಖಾನ್ ಎದುರು ಛತ್ರಪತಿ ಶಿವಾಜಿಯ ಗೆಲುವಿನ ವರ್ಷಾಚರಣೆ ವೇಳೆ ರಾಣೆ ಈ ಹೇಳಿಕೆ ನೀಡಿದ್ದಾರೆ.

ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ರಾಣೆ, ಕೇರಳ ಭಾರತದ ಭಾಗವಾಗಿದೆ ಎಂದು ಸ್ಪಷ್ಟಪಡಿಸಿದರು. ಆದರೆ ಕೇರಳನ್ನು ಪಾಕಿಸ್ತಾನಕ್ಕೆ ಹೋಲಿಸಿದ ಹೇಳಿಕೆಯನ್ನು ಸಮರ್ಥಿಸಲು ಧಾರ್ಮಿಕ ಮತಾಂತರಗಳು ಮತ್ತು ಲವ್ ಜಿಹಾದ್ ನಂತಹ ವಿಷಯಗಳನ್ನು ಉಲ್ಲೇಖಿಸಿದ್ದು, ತಮ್ಮ ಹೇಳಿಕೆ ವಾಸ್ತವಿಕವಾಗಿದೆ ಎಂದಿದ್ದಾರೆ.