ಖಲೀದಾ ಜಿಯಾ ಅಂತ್ಯಕ್ರಿಯೆ: ಸಚಿವ ಎಸ್. ಜೈಶಂಕರ್ ಭಾಗಿ
Khaleda Zia's funeral: Minister S. Jaishankar attends
ಢಾಕಾ: ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ಬಿಎನ್ಪಿ (BNP) ನಾಯಕಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರು ಬುಧವಾರ ಢಾಕಾಕ್ಕೆ ಭೇಟಿ ನೀಡಿದರು.
ವಿಶೇಷ ವಿಮಾನದ ಮೂಲಕ ಬುಧವಾರ ಬೆಳಿಗ್ಗೆ 11:30ಕ್ಕೆ ಢಾಕಾ ತಲುಪಿದ ಜೈಶಂಕರ್ ಅವರನ್ನು ಬಾಂಗ್ಲಾದೇಶದ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ನಂತರ ಜೈಶಂಕರ್ ಅವರು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಕ್ಷದ ಹಂಗಾಮಿ ಅಧ್ಯಕ್ಷ ಹಾಗೂ ಬೇಗಂ ಖಾಲಿದಾ ಜಿಯಾ ಅವರ ಪುತ್ರ ತಾರಿಕ್ ರೆಹಮಾನ್ ಅವರನ್ನು ಭೇಟಿಯಾದರು. ಈ ವೇಳೆ ಜೈಶಂಕರ್ ಅವರು, ಪ್ರಧಾನಿ ಮೋದಿ ಅವರ ವೈಯಕ್ತಿಕ ಪತ್ರವನ್ನು ಹಸ್ತಾಂತರಿಸಿದರು. ಭಾರತ ಸರ್ಕಾರ ಮತ್ತು ಜನತೆಯ ಪರವಾಗಿ ಜೈಶಂಕರ್ ಅವರು ಅಂತಿಮ ನಮನ ಸಲ್ಲಿಸಿದರು.
ಢಾಕಾದ ಶೇರ್-ಎ-ಬಾಂಗ್ಲಾ ನಗರದಲ್ಲಿರುವ ತಮ್ಮ ಪತಿ, ದಿವಂಗತ ಅಧ್ಯಕ್ಷ ಜಿಯಾವುರ್ ರೆಹಮಾನ್ ಅವರ ಸಮಾಧಿಯ ಪಕ್ಕದಲ್ಲೇ ಖಲೀದಾ ಜಿಯಾ ಅವರ ಪಾರ್ಥಿವ ಶರೀರವನ್ನು ಮಣ್ಣು ಮಾಡಲಾಯಿತು.
ಸಾವಿರಾರು ಅಭಿಮಾನಿಗಳು, ಭಾರತ ಸೇರಿದಂತೆ ವಿವಿಧ ದೇಶಗಳ ರಾಜತಾಂತ್ರಿಕರು ಮತ್ತು ವಿದೇಶಿ ಗಣ್ಯರು ಅಶ್ರುತರ್ಪಣದ ನಡುವೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿತು.
ಬಾಂಗ್ಲಾದೇಶದ ರಾಜಕೀಯದಲ್ಲಿ ದಶಕಗಳ ಕಾಲ ಪ್ರಾಬಲ್ಯ ಹೊಂದಿದ್ದ ಖಲೀದಾ ಜಿಯಾ ಅವರು ಸುದೀರ್ಘ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳವಾರ 80ನೇ ವಯಸ್ಸಿನಲ್ಲಿ ನಿಧನರಾದರು. ಮೂರು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದ ಇವರು, ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿಯ (BNP)
ಚುಕ್ಕಾಣಿ ಹಿಡಿದಿದ್ದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 