ಖಾಸ್ಗತೇಶ್ವರ ಜಾತ್ರೆ: ಡಾ.ಪ್ರಭುಗೌಡ ಲಿಂಗದಳ್ಳಿ ವಿಶೇಷ ಪ್ರಸಾದ ವ್ಯವಸ್ಥೆ
Khasgateshwar Fair: Special Prasadam Arrangement by Dr.Prabhu Gowda Lingadalli
ತಾಳಿಕೋಟಿ 08: ಪಟ್ಟಣದ ಐತಿಹಾಸಿಕ ಶ್ರೀ ಖಾಸ್ಗತೇಶ್ವರ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಮಂಗಳವಾರ ದಂದು ಆನೆ ಅಂಬಾರಿ ಮೆರವಣಿಗೆ ಹಾಗೂ ಮಹಾ ರಥೋತ್ಸವದಲ್ಲಿ ಭಾಗವಹಿಸಲು ಆಗಮಿಸುವ ಸಾವಿರಾರು ಭಕ್ತಾದಿಗಳಿಗೆ ವಿಜಯಪುರ ಅನುಗ್ರಹ ಕಣ್ಣಿನ ಆಸ್ಪತ್ರೆಯ ಮುಖ್ಯಸ್ಥರಾದ ಡಾ.ಪ್ರಭುಗೌಡ ಲಿಂಗದಳ್ಳಿ ಇವರ ವತಿಯಿಂದ ಭಕ್ತಾದಿಗಳಿಗೆ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಯಿತು.
ಪ್ರಸಾದ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಡಾ.ಪ್ರಭುಗೌಡ ಲಿಂಗದಳ್ಳಿ ಸಹೋದರ ಸಂಗನಗೌಡ ಲಿಂಗದಳ್ಳಿ ಅವರು ಕಳೆದ ಕೆಲವು ವರ್ಷಗಳಿಂದ ನಾವು ಖಾಸ್ಗತ ಅಜ್ಜನ ಜಾತ್ರೆಯಲ್ಲಿ ಪ್ರಸಾದ ವ್ಯವಸ್ಥೆಯನ್ನು ಮಾಡುತ್ತಲೇ ಬಂದಿದ್ದೇವೆ ಪ್ರತಿ ವರ್ಷವೂ ವಿಶಿಷ್ಟವಾದ ಖಾದ್ಯ ಪದಾರ್ಥಗಳನ್ನು ಸಿದ್ಧಪಡಿಸುತ್ತೇವೆ. ಈ ಬಾರಿ ಎಲ್ಲರೂ ಇಷ್ಟಪಡುವ ಪಲಾವ್ ಹಾಗೂ ಸಿಹಿ ಪದಾರ್ಥವಾದ ಶಿರಾದ ವ್ಯವಸ್ಥೆಯನ್ನು ಮಾಡಿದ್ದು ಸುಮಾರು 8 ರಿಂದ10, ಸಾವಿರ ಕ್ಕಿಂತಲೂ ಹೆಚ್ಚು ಭಕ್ತಾದಿಗಳು ಈ ಪ್ರಸಾದವನ್ನು ಸ್ವೀಕರಿಸಲಿದ್ದಾರೆ. ಇದರ ಜೊತೆಗೆ 10, ಸಾವಿರ ಜನರಿಗೆ ಕುಡಿಯುವ ನೀರಿನ ಪೌಚ್‌ಗಳನ್ನು ವಿತರಿಸುತಿದ್ದೇವೆ, ಇದಕ್ಕಿಂತಲೂ ಮೊದಲು ನಮ್ಮ ಅನುಗ್ರಹ ಕಣ್ಣಿನ ಆಸ್ಪತ್ರೆ ಮತ್ತು ಬಿಎಲ್‌ಡಿಇ ವೈದ್ಯಕೀಯ ಆಸ್ಪತ್ರೆ ಸಹಯೋಗದಲ್ಲಿ ಆರೋಗ್ಯ ಜಾತ್ರೆ ಹೆಸರಿನಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದು ಸಾವಿರಾರು ಗ್ರಾಮಸ್ಥರು ಇದರ ಸದುಪಯೋಗ ಮಾಡಿಕೊಂಡಿದ್ದಾರೆ. ಶ್ರೀ ಖಾಸ್ಗತ ಅಜ್ಜನ ಕೃಪೆ ಎಲ್ಲರಿಗೂ ಆಗಲೆಂದು ಪ್ರಾರ್ಥಿಸುತ್ತೇನೆ ಎಂದರು.
ಪಿಎಸ್‌ಐ ರಾಮನಗೌಡ ಸಂಕನಾಳ, ಗಣ್ಯರಾದ ಶಿವು ದೇಸಾಯಿ, ಮುತ್ತುಗೌಡ ಯಾಳವಾರ, ಮಲ್ಲನಗೌಡ ಬಿರಾದಾರ, ಪ್ರವೀಣ ರೆಡ್ಡಿ, ಬಾಲು ತಳವಾರ, ಸಂಗನಗೌಡ ಬಿರಾದಾರ, ಸಿ.ಎಸ್. ನ್ಯಾಮಣ್ಣವರ, ಗುರುಸಂಗಪ್ಪ ಗೌಡ ಮ್ಯಾಗೇರಿ, ಬಸವರಾಜ ಕಲಕೇರಿ, ಸುರೇಶಕುಮಾರ ಪೀರಾಪೂರ, ಸತೀಶ ಕುಲಕರ್ಣಿ, ಮುದ್ದಣ್ಣ ಚೌದ್ರಿ, ಮಹಾಂತೇಶ ಹುಜರತಿ ಹಾಗೂ ಅನುಗ್ರಹ ಆಸ್ಪತ್ರೆ ತಾಳಿಕೋಟಿ ಶಾಖೆಯ ಸಿಬ್ಬಂದಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 