ಖಾಸ್ಗತೇಶ್ವರ ಜಾತ್ರೆ: ಗೋಪಾಲ ಕಾವಲಿ ಕಾರ್ಯಕ್ರಮಕ್ಕೆ ಸಿದ್ದಲಿಂಗಶ್ರೀ ಚಾಲನೆ
Khasgateshwar Jatre: Siddalingashree drive for Gopal Kavali programme
ತಾಳಿಕೋಟಿ 08: ಪಟ್ಟಣದ ಐತಿಹಾಸಿಕ ಖಾಸ್ಗತೇಶ್ವರ ಮಠದ ಜಾತ್ರಾ ಮಹೋತ್ಸವದ ಅಂಗವಾಗಿ ಪಾರಂಪರಿಕ ಗೋಪಾಲ ಕಾವಲಿ (ಮೊಸರು ಗಡಿಗೆ ಒಡೆಯುವ) ಕಾರ್ಯಕ್ರಮಕ್ಕೆ ಸಿದ್ದಲಿಂಗ ದೇವರು ಚಾಲನೆ ನೀಡಿದರು.
ಸೋಮವಾರ ಮುಂಜಾನೆ 5ಘಂಟೆಗೆ ಶ್ರೀಮಠದಲ್ಲಿ ನಡೆಯುವ ಈ ಜನಪದೀಯ ಸಂಸ್ಕೃತಿಯ ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಖಾಸ್ಗತರು ಆ ಕಾಲದಲ್ಲಿ ಈ ಭಾಗದ ಭಕ್ತರು ಪಾದಯಾತ್ರೆ ಮೂಲಕ ಪಂಡರಪುರಕ್ಕೆ ಪಾಂಡುರಂಗ ವಿಠಲನ ದರ್ಶನಕ್ಕೆ ಹೋಗುವುದನ್ನು ನೋಡಿ ತಾವೇ ಸ್ವತಹ ಪಂಡರಪುರಕ್ಕೆ ಪ್ರಯಾಣ ಮಾಡಿ ಅಲ್ಲಿರುವ ಮೊಸರು ಗಡಿಗೆ ಒಡೆಯುವ ಕಾರ್ಯಕ್ರಮ ಇಲ್ಲಿಯೇ ನಡೆಸಿ ಭಕ್ತರಿಗೆ ಅನುಕೂಲ ಮಾಡಿಕೊಡಲೆಂದು ಅಲ್ಲಿಂದ ಮೊಸರು ಗಡಿಗೆಯನ್ನು ತಂದು ಈ ವಿಶಿಷ್ಟ ಕಾರ್ಯಕ್ರಮವನ್ನು ಆರಂಭಿಸಿದರು. ಅಂದಿನಿಂದ ಇಂದಿನವರೆಗೆ ಈ ಸಂಪ್ರದಾಯ ಶ್ರೀಮಠದಲ್ಲಿ ನಡೆಯುತ್ತಾ ಬಂದಿದೆ ಎಂದರು.
ಮಠದ ಆಡಳಿತ ಮುಖ್ಯಸ್ಥ ಮುರುಗೇಶ ವಿರಕ್ತಮಠ ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 