ಚಂಡಿಗಡ, ಅ. 26: ಸತತ ಎರಡನೇ ಅವಧಿಗೆ ಹರಿಯಾಣದ ಮುಖ್ಯಮಂತ್ರಿಯಾಗಲು ಸಜ್ಜಾಗಿರುವ ಮನೋಹರ್ ಲಾಲ್ ಖಟ್ಟರ್ ಅವರು ಇಂದು ರಾಜ್ಯಪಾಲ ಸತ್ಯದೇವ್ ನಾರಾಯಣ್ ಆರ್ಯ ಅವರನ್ನು ಭೇಟಿ ಮಾಡಿ ಸರ್ಕಾರ ರಚಿಸುವ ಹಕ್ಕು ಮಂಡಿಸಲಿದ್ದಾರೆ. ಗುರುವಾರ ನಡೆದ ಚುನಾವಣಾ ಫಲಿತಾಂಶಗಳು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಈಗ ಬಿಜೆಪಿ ಪಕ್ಷೆತರರ ಬೆಂಬಲದ ಮೂಲಕ ಸರಕಾರ ರಚನೆಗೆ ಮುಂದಾಗಿದೆ. ಹರಿಯಾಣದ 90 ಸ್ಥಾನಗಳಲ್ಲಿ 10 ಸ್ಥಾನಗಳನ್ನು ಗೆದ್ದ ಮತ್ತು ರಾಜ್ಯ ರಾಜಕಾರಣದಲ್ಲಿ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಲ್ಲಿದ್ದ ಜನ್ನಾಯಕ್ ಜನತಾ ಪಕ್ಷ (ಜೆಜೆಪಿ) ಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಹೇಳುತ್ತಿದೆ. ಬಿಜೆಪಿ 40 ಸ್ಥಾನಗಳನ್ನು ಗೆದ್ದಿದ್ದು ಸರಳ ಬಹುಮತಕ್ಕಿಂತ ಆರು ಸ್ಥಾನಗಳು ಕಡಿಮೆಯಾಗಿದೆ. ರಾಜ್ಯದ ಪ್ರಬಲ ಸಮುದಾಯವಾದ ಜಾಟ್ ರನ್ನು ಸಮಾಧಾನಪಡಿಸುಲು ಬಿಜೆಪಿ ಮುಂದಾಗಿದೆ ಎಂದೂ ಹೇಳಲಾಗಿದೆ.