ಮಕ್ಕಳ ವೈದ್ಯ ಡಾ.ಸುನೀಲ್ ಅಪಹರಣ: 3 ಕೋಟಿಗೆ ಬೇಡಿಕೆ

Kidnap of pediatrician Dr. Sunil: Demand for 3 crores

ಬಳ್ಳಾರಿ 25: ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣ ಮಾಡಿರುವ ಘಟನೆ ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ಶನಿವಾರ ಬೆಳಿಗ್ಗೆ ನಡೆದಿದೆ.

ಕಾರಿನಲ್ಲಿ ಬಂದ ದುಷ್ಕರ್ಮಿಗಳ ಗ್ಯಾಂಗ್ ಇಂದು ಬೆಳಗ್ಗೆ ವಾಕಿಂಗ್ ಹೋಗುತ್ತಿದ್ದ ವೈದ್ಯ ಡಾ. ಸುನೀಲ್ ಅವರ ಬಾಯಿಗೆ ಬಟ್ಟೆ ತುರುಕಿ ಕಿಡ್ನ್ಯಾಪ್ ಮಾಡಿಕೊಂಡು ಹೋಗಿದೆ. ನಗರದ ಸತ್ಯನಾರಾಯಣ ಪೇಟೆ ಬಳಿ ಅಪಹರಣ ನಡೆದಿದೆ.

ಸುನೀಲ್‌ ಮೊಬೈಲ್‌ನಿಂದಲೇ ಅವರ ತಮ್ಮ, ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಗುಪ್ತ ಅವರಿಗೆ ಕರೆ ಮಾಡಿರುವ ಅಪಹರಣಕಾರರು 3 ಕೋಟಿಯಷ್ಟು ಹಣ ಮತ್ತು ಚಿನ್ನ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದುತಿಳಿದು ಬಂದಿದೆ. ಸದ್ಯ ಪೊಲೀಸರು ಅಪಹರಣಕಾರರ ಜಾಡು ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ನಗರದ ಹಲವೆಡೆ ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.