ಅಪಹರಣವಾಗಿದ್ದ ವ್ಯಾಪಾರಿಗಳು ಶವವಾಗಿ ಪತ್ತೆ
Kidnapped traders found dead
ಅಪಹರಣವಾಗಿದ್ದ ವ್ಯಾಪಾರಿಗಳು ಶವವಾಗಿ ಪತ್ತೆ
ಹೂವಿನಹಡಗಲಿ 17: ತಾಲ್ಲೂಕಿನ ಹೊಳಲು ಗ್ರಾಮದ ಹೊರ ವಲಯದಲ್ಲಿ ಅ.10ರಂದು ಅಪಹರಣವಾಗಿದ್ದ ವರ್ತಕ ಹೊಳಲು ಗ್ರಾಮದ ಮಂಜುನಾಥ ಶೇಜವಾಡಕರ್ (58) ಅವರ ಶವ ಗುರುವಾರ ಹರವಿ ಬಸಾಪುರ ಬಳಿ ತುಂಗಭದ್ರಾ ನದಿ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೃತ್ಯವೆಸಗಿ ಪರಾರಿಯಾಗಿದ್ದ ಆರೋಪಿಗಳಾದ ಹೊಳಲು ಗ್ರಾಮದ ಮಲ್ಲಿಕಾರ್ಜುನ ಉಜ್ಜಮ್ಮನವರ (27), ಯೋಗೇಶ ಅಂಗಡಿ (25) ಎಂಬುವವರನ್ನು ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ವಶಕ್ಕೆ ಪಡೆದಿದ್ದು, ಬುಧವಾರ ರಾತ್ರಿ ಆರೋಪಿಗಳನ್ನು ಕರೆ ತಂದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಅವರು ನೀಡಿದ ಮಾಹಿತಿ ಮೇರೆಗೆ ನದಿಯಲ್ಲಿ ಹುಡುಕಾಡಿದಾಗ ಶವ ದೊರೆತಿದೆ.’ಅಪಹರಣಕಾರರು ಮಂಜುನಾಥ ಶೇಜವಾಡಕರ್ ಅವರ ಕೈ ಕಾಲು ಕಟ್ಟಿ, ಬಾಯಿಗೆ ಪ್ಲಾಸ್ಟರ್ ಹಾಕಿ ಕಾರಿನ ಡಿಕ್ಕಿಯಲ್ಲಿ ಇರಿಸಿ ಇಡೀ ದಿನ ರಾಣೇಬೆನ್ನೂರು ಸುತ್ತಮುತ್ತ ಸುತ್ತಾಡಿಸಿದ್ದರು. ಇದರಿಂದ ಅವರು ಉಸಿರುಗಟ್ಟಿ ಸಾವೀಗೀಡಾಗಿದ್ದಾರೆ. ನಂತರ ಶವವನ್ನು ಶುಕ್ರವಾರ ರಾತ್ರಿ ಹರವಿ ಸೇತುವೆ ಮೇಲಿನಿಂದ ತುಂಗಭದ್ರಾ ನದಿಗೆ ಎಸೆದು ಪರಾರಿಯಾಗಿರುವುದಾಗಿ ಅಪಹರಣಕಾರರು ವಿಚಾರಣೆರಾತ್ರಿ ಆರೋಪಿಗಳನ್ನು ಕರೆ ತಂದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಅವರು ನೀಡಿದ ಮಾಹಿತಿ ಮೇರೆಗೆ ನದಿಯಲ್ಲಿ ಹುಡುಕಾಡಿದಾಗ ಶವ ದೊರೆತಿದೆ.ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ ಎಂದು ಪೋಲಿಸ್ ರು ತಿಳಿಸಿದರು.ಘಟನೆಯ ವಿವರ: ಅ.10 ರಂದು ಬೆಳಿಗ್ಗೆ ಮೈಲಾರ ರಸ್ತೆಯಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಮಂಜುನಾಥ ಶೇಜವಾಡಕರ್ ಅವರನ್ನು ಆರೋಪಿಗಳು ಅಪಹರಿಸಿ ? 5 ಕೋಟಿಗೆ ಬೇಡಿಕೆ ಇರಿಸಿದ್ದರು.ಹಣ ಕೊಡಲು ಒಪ್ಪಿರಲಿಲ್ಲ.ಕೊಲೆ ಬೆದರಿಕೆ ಹಾಕಿದ್ದರು. ಹಿರೇಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಗ ತನಕವೂ ಮಂಜುನಾಥ ಅವರು ಜೀವಂತವಾಗಿಯೇ ಇದ್ದರು. ಎಫ್‌ಐಆರ್ ಆದದ್ದು ಗೊತ್ತಾದ ತಕ್ಷಣ ಭಯಗೊಂಡ ಅಪಹರಣಕಾರರು ಡಿಕ್ಕಿಯಲ್ಲಿ ಬಚ್ಚಿಡುವ ಪ್ರಯತ್ನ ಮಾಡಿದರು.
ಇದರಿಂದಾಗಿಯೇ ಮಂಜುನಾಥ ಮೃತಪಟ್ಟರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಮಂಜುನಾಥ ಶೆಜವಾಡಕರ್, ಇತ್ತೀಚಿಗೆ ಚಿನ್ನಾಭರಣ ವ್ಯಾಪಾರ ಕೈಬಿಟ್ಟು, ಸ್ಥಳೀಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಚಿನ್ನಾಭರಣ ಮೌಲ್ಯಮಾಪಕರಾಗಿದ್ದರು. ಅವರಿಗೆ ಪತ್ನಿ, 9 ಮತ್ತು 4ನೇ ತರಗತಿಯಲ್ಲಿ ಓದುತ್ತಿರುವ ಇಬ್ಬರು ಪುತ್ರರು ಇದ್ದಾರೆ.ಘಟನಾ ಸ್ಥಳಕ್ಕೆ ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ದೀಪಕ್ ಬೂಸರೆಡ್ಡಿ, ಪಿಎಸ್‌ಐ ಭರತ್ ಪ್ರಕಾಶ್ ಹಾಗೂ ಸಿಬಂದಿ ಬೇಟಿ ನೀಡಿ ಪರೀಶೀಲಿಸಿದರು.ಘಟನಾ ಸ್ಥಳಕ್ಕೆ ಡಿವೈಎಸ್ಪಿ ವೆಂಕಟಪ್ಪ ನಾಯಕ, ಸಿಪಿಐ ದೀಪಕ್ ಬೂಸರೆಡ್ಡಿ, ಪಿಎಸ್‌ಐ ಭರತ್ ಪ್ರಕಾಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರೀಶೀಲಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 