‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಗೆ ಕಿರಣ ಚೌಗಲಾ ಆಯ್ಕೆ

‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಗೆ ಕಿರಣ ಚೌಗಲಾ ಆಯ್ಕೆ  Kiran Chougala selected for ‘Shikshana Seva Ratna’ award

ಲೋಕದರ್ಶನ ವರದಿ 

ಯಮಕನಮರಡಿ 16: ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ನೀಡಲಾಗುವ 2026ನೇ ಸಾಲಿನ ರಾಜ್ಯಮಟ್ಟದ ‘ಶಿಕ್ಷಣ ಸೇವಾ ರತ್ನ’ ಪ್ರಶಸ್ತಿಗೆ ಹುಕ್ಕೇರಿ ತಾಲ್ಲೂಕಿನ ಯರಗಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಕಿರಣ ಚೌಗಲಾ ಆಯ್ಕೆಯಾಗಿದ್ದಾರೆ.  

ಕಳೆದ ಹಲವು ವರ್ಷಗಳಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಕಿರಣ ಚೌಗಲಾ ಅವರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೊಂದಿಗೆ ಅವರ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೂ ಆದ್ಯತೆ ನೀಡುತ್ತಿದ್ದಾರೆ. ಗುಣಮಟ್ಟದ ಬೋಧನೆ, ವಿದ್ಯಾರ್ಥಿಗಳಿಗೆ ನಿರಂತರ ಮಾರ್ಗದರ್ಶನ, ಶೈಕ್ಷಣಿಕ ಫಲಿತಾಂಶ ಸುಧಾರಣೆ, ಪಠ್ಯೇತರ ಚಟುವಟಿಕೆಗಳು ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅವರು ಕೈಗೊಂಡಿರುವ ಕಾರ್ಯಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.  

ಶಾಲೆಯಲ್ಲಿ ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಜಾಗೃತಿ ಕಾರ್ಯಕ್ರಮಗಳು, ಬೀದಿ ನಾಟಕಗಳು, ಚಲನಚಿತ್ರ ಪ್ರದರ್ಶನಗಳು, ವಿವಿಧ ಸ್ಪರ್ಧೆಗಳು, ಅತಿಥಿ ಉಪನ್ಯಾಸಗಳು ಹಾಗೂ ವ್ಯಕ್ತಿತ್ವ ವಿಕಸನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜಾಗೃತಿ ಮತ್ತು ಆತ್ಮವಿಶ್ವಾಸ ಬೆಳೆಸಲು ಅವರು ಶ್ರಮಿಸುತ್ತಿದ್ದಾರೆ.  ಪ್ರಶಸ್ತಿ ಪ್ರದಾನ ಸಮಾರಂಭವು ಸೆ.20ರಂದು ಬೆಂಗಳೂರಿನ ಟೌನ್ ಹಾಲ್ನಲ್ಲಿ ನಡೆಯಲಿದೆ.