ಬೆಂಗಳೂರು, ಜೂ.6, ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ರಕ್ಷಿತ್ ಶೆಟ್ಟಿ ತಮ್ಮ ಹುಟ್ಟು ಹಬ್ಬವನ್ನು ಹುಟ್ಟೂರಾದ ಉಡುಪಿಯ ಅಲೆವೂರಿನಲ್ಲಿ ಕುಟುಂಬಸ್ಥರೊಂದಿಗೆ ಸರಳವಾಗಿ ಆಚರಿಸಿಕೊಂಡಿದ್ದಾರೆ. ಪ್ರತಿವರ್ಷ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದ ರಕ್ಷಿತ್ ಶೆಟ್ಟಿ, ಈ ಬಾರಿ ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ತಂದೆ, ತಾಯಿ, ಅಣ್ಣ, ಅತ್ತಿಗೆ, ಅಣ್ಣನ ಮಕ್ಕಳ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ.
ಇನ್ನು, ರಕ್ಷಿತ್ ಶೆಟ್ಟಿ ಅವರಿಗೆ ಹುಟ್ಟು ಹಬ್ಬದ ನಿಮಿತ್ಯ ವಿಶೇಷ ಉಡುಗೊರೆ ದೊರೆತಿದೆ. ಪುಷ್ಕರ್ ಫಿಲಮ್ಸ್‍ನಿಂದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದ್ದು, ಮತ್ತೊಂದೆಡೆ ಅವರದ್ದೇ ತಂಡ ಪರಂವಃ ಸ್ಟುಡಿಯೋಸ್ ‘777 ಚಾರ್ಲಿ’ ಸಿನಿಮಾದ ವಿಡಿಯೋ ತುಣಕನ್ನು ಬಿಡುಗಡೆ ಮಾಡಿದೆ.ಇನ್ನೂ, ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿಯವರನ್ನು ಖೈದಿ ರಿಜಿಸ್ಟರ್ ನಲ್ಲಿ ತೋರಿಸುವ ಮೂಲಕ ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದ್ದಾರೆ. ಅಲ್ಲದೇ,ಅವರ ಮುಂಬರುವ 777 ಚಾರ್ಲಿ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ, ಧರ್ಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಚಿತ್ರದಲ್ಲಿ ನಾಯಿಗೆ ಚಾರ್ಲಿ ಎಂದು ನಾಮಕರಣ ಮಾಡಲಾಗಿದೆ.ಧರ್ಮ ಮತ್ತು ಚಾರ್ಲಿ ನಡುವಿನ ಕಾಂಬಿನೇಶನ್ ವಿಡಿಯೋದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಪ್ರೇಕ್ಷಕರು ಕಾತರ ಇನ್ನಷ್ಟು ಹೆಚ್ಚಿಸಿದೆ.