ಕಿತ್ತೂರು ಉತ್ಸವ: ವೀರಜ್ಯೋತಿಗೆ ಅದ್ದೂರಿ ಸ್ವಾಗತ

ಲೋಕದರ್ಶನ ವರದಿ

ಬೆಳಗಾವಿ 17: ಕಿತ್ತೂರು ಉತ್ಸವದ ಅಂಗವಾಗಿ ಜಿಲ್ಲೆಯಲ್ಲಿ ಸಂಚಾರ ಕೈಗೊಂಡಿರುವ ವೀರಜ್ಯೋತಿ 17 ರಂದು ನಗರದ ಚನ್ನಮ್ಮ ವೃತ್ತದಲ್ಲಿ ಸಂಭ್ರಮದಿಂದ ಬರಮಾಡಿಕೊಳ್ಳಲಾಯಿತು. ವೀರಜ್ಯೋತಿ ಹೊತ್ತು ಖಾನಾಪುರದಿಂದ ಆಗಮಿಸಿದ ವಾಹನಕ್ಕೆ ಸಂಸದ ಸುರೇಶ ಅಂಗಡಿ, ಶಾಸಕ ಅನಿಲ್ ಬೆನಕೆ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

                ನಂತರ ಮಾತನಾಡಿದ ಸಂಸದ ಸುರೇಶ ಅಂಗಡಿ ಅವರು, "ಸ್ವಾತಂತ್ರ್ಯದ ಕಿಚ್ಚು ಹೊತ್ತಿಸಿದ ವೀರ ರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ ಅಂಗವಾಗಿ ಪ್ರತಿವರ್ಷ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಹೋರಾಟದ ಬದುಕಿನ ಮೇಲೆ ಬೆಳಕು ಚೆಲ್ಲುವ ಉತ್ಸವವನ್ನು ಮುಂಬರುವ ದಿನಗಳಲ್ಲಿ ಇನ್ನಷ್ಟು ಅದ್ಧೂರಿಯಾಗಿ ಆಚರಿಸಲು ಸಕರ್ಾರ ಹೆಚ್ಚಿನ ನೆರವು ಒದಗಿಸಬೇಕಿದೆ" ಎಂದು ಹೇಳಿದರು.

                ವೀರಜ್ಯೋತಿ ಸ್ವಾಗತಿಸಿದ ಬಳಿಕ ಸಂಸದ ಸುರೇಶ ಅಂಗಡಿ, ಶಾಸಕ ಅನಿಲ್ ಬೆನಕೆ ಹಾಗೂ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು ಕಿತ್ತೂರು ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಉಪ ವಿಭಾಗಾಧಿಕಾರಿ ಡಾ.ಕವಿತಾ ಯೋಗಪ್ಪನವರ, ವಾತರ್ಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿದರ್ೇಶಕ ಗುರುನಾಥ ಕಡಬೂರ, ತಹಶೀಲ್ದಾರ ಮಂಜುಳಾ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೇಶಕ ಶ್ರೀಶೈಲ್ ಕರಿಶಂಕರಿ ಮತ್ತಿತರರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

                ಬೈಲಹೊಂಗಲದಿಂದ ಅಕ್ಟೋಬರ್ 16 ರಂದು ಹೊರಟಿರುವ ವೀರಜ್ಯೋತಿಯು ಖಾನಾಪುರ ಮಾರ್ಗವಾಗಿ ಬೆಳಗಾವಿ ನಗರವನ್ನು ಪ್ರವೇಶಿಸಿತು. ವೀರಜ್ಯೋತಿಯನ್ನು ರೈಲ್ವೆ ನಿಲ್ದಾಣದ ಬಳಿಯ ಗೋಗಟೆ ವೃತ್ತದಿಂದ ಮೆರವಣಿಗೆ ಮೂಲಕ ಕರೆತರಲಾಯಿತು. ವೀರಜ್ಯೋತಿಯು ಗುರುವಾರ(.18) ಹುಕ್ಕೇರಿ ತಾಲ್ಲೂಕಿನಲ್ಲಿ ಸಂಚರಿಸಲಿದ್ದು, .22 ರಂದು ಸಂಜೆ ಕಿತ್ತೂರು ಸೈನಿಕ ಶಾಲೆ ತಲುಪಲಿದೆ. ಉತ್ಸವದ ದಿನವಾದ .23 ರಂದು ಬೆಳಿಗ್ಗೆ 9 ಗಂಟೆಗೆ ಕಿತ್ತೂರು ಪ್ರವೇಶಿಸಲಿದೆ.