ಕಿತ್ತೂರು ಕರ್ನಾಟಕ ಸೇನೆಯು ಕರ್ನಾಟಕ ಪರವಾದ ನಿರ್ಣಯಗಳನ್ನು ಅಂಗೀಕರಿಸುವಂತೆ ಮನವಿ
Kittur Karnataka Sena appeals to pass pro-Karnataka resolutions
ಲೋಕದರ್ಶನ ವರದಿ
ಬೆಳಗಾವಿ 31 : ಬೆಳಗಾವಿ ಮಹಾನಗರ ಪಾಲಿಕೆಯ ಸರ್ವ ಸಾಧಾರಣ ಸಭೆಯಲ್ಲಿ ಕರ್ನಾಟಕ ಪರವಾದ ನಿರ್ಣಯಗಳನ್ನು ಅಂಗೀಕರಿಸುವಂತೆ ಆಗ್ರಹಿಸಿ ಬೆಳಗಾವಿಯ ಸಮಾನ ಮನಸ್ಕ ಕನ್ನಡ ಸಂಘಟನೆಗಳು ಆರಂಭಿಸಿರುವ ಆಂದೋಲನದ ಭಾಗವಾಗಿ ಕಿತ್ತೂರು ಕರ್ನಾಟಕ ಸೇನೆಯ ಯುವ ಘಟಕವು ಮಂಗಳವಾರ ಮುಂಜಾನೆ ಮಹಾನಗರ ಪಾಲಿಕೆಯ ಎದಿರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿತ್ತಲ್ಲದೇ ಮಹಾಪೌರರಾದ ಪ್ರೀತಿ ಕಾಮಕರ ಹಾಗೂ ಉಪಮಹಾಪೌರರಾದ ಹಣಮಂತ ಕೊಂಗಾಲಿಯವರಿಗೆ ಮನವಿ ಸಲ್ಲಿಸಿತು.
ಯುವ ಘಟಕದ ರಾಜ್ಯಾಧ್ಯಕ್ಷ ಮಹೇಶ ಶೀಗೀಹಳ್ಳಿ ಅವರ ನೇತೃತ್ವದಲ್ಲಿ ನಡೆದ ಇಂದಿನ ಧರಣಿ ಸತ್ಯಾಗ್ರಹಿಗಳು ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮಹಾಪೌರರು ಹಾಗೂ ಉಪಮಹಾಪೌರರು ಮನವಿಯನ್ನು ಸಹಾನುಭೂತಿಯಿಂದ ಪರೀಶೀಲಿಸುವದಾಗಿ ಭರವಸೆ ನೀಡಿದರು.
2005 ರ ಅಕ್ಟೋಬರ್ 27 ರಂದು ಪಾಲಿಕೆಯ ಸಭೆಯಲ್ಲಿ ಮಹಾರಾಷ್ಟ್ರದ ಪರವಾಗಿ ಅಂಗೀಕರಿಸಿದ ಗೊತ್ತುವಳಿಯನ್ನು ಮಹಾರಾಷ್ಟ್ರ ಸರಕಾರ ಸುಪ್ರೀಮ್ ಕೋರ್ಟಿನ ಗಡಿ ವಿವಾದ ದಾವೆಯಲ್ಲಿ ಪೂರಕ ದಾಖಲೆಯನ್ನಾಗಿ ಬಳಸುತ್ತಿದೆ. ಇದು ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ ತರಬಹುದಾಗಿದೆ. ಈಗ ಪಾಲಿಕೆಯಲ್ಲಿ ಕರ್ನಾಟಕ ಪರವಾಗಿರುವ ಸದಸ್ಯರ ಸಂಖ್ಯೆ 55 ಆಗಿರುವದರಿಂದ ಕರ್ನಾಟಕದ ಪರವಾಗಿ ನಿರ್ಣಯಗಳನ್ನು ಅಂಗೀಕರಿಸಲು ಯಾವುದೇ ಅಡಚಣೆಗಳಿಲ್ಲ. ಆದ್ದರಿಂದ ಆದಷ್ಟು ಬೇಗ ಇಂತಹ ನಿರ್ಣಯವನ್ನು ಅಂಗೀಕರಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಯುವ ಘಟಕವು ಪಾಲಿಕೆಯ ಆಯುಕ್ತ ಎಮ್. ಕಾರ್ತಿಕ ಅವರಿಗೆ ಮತ್ತೊಂದು ಮನವಿಯನ್ನು ಸಲ್ಲಿಸಿದ್ದು ಬೆಳಗಾವಿ ಮಹಾನಗರದ ನಾಮಫಲಕಗಳಲ್ಲಿ ಪ್ರತಿಶತ 60 ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಬೇಕೆಂದು ಆಗ್ರಹಿಸಿತು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 