ಜಿಲ್ಲಾಡಳಿತದಿಂದ ಆಚರಿಸಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ

 ಜಿಲ್ಲಾಡಳಿತದಿಂದ ಆಚರಿಸಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ Kittur Rani Channamma Jayanti celebrated by the district administration

ಲೋಕದರ್ಶನ ವರದಿ 

ಜಿಲ್ಲಾಡಳಿತದಿಂದ ಆಚರಿಸಿದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ  

ಧಾರವಾಡ 23: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಇಂದು (ಅ.23) ಬೆಳಿಗ್ಗೆ ನಗರದ ಆಲೂರು ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.  

ಉಪವಿಭಾಗಾಧಿಕಾರಿ ಶಾಲಂ ಹುಸೇನ್ ಅವರು ಕಿತ್ತೂರ ರಾಣಿ ಚನ್ನಮ್ಮ ಅವರ ಭಾವಚಿತ್ರಕ್ಕೆ ಪುಷ​‍್ಾರೆ್ಪಣ ಮಾಡಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  

ದಾಂಡೇಲಿ ಸರ್ಕಾರಿ ಪದವಿ ಮಹಾವಿದ್ಯಾಲಯದ ಕನ್ನಡದ ಪ್ರಾಧ್ಯಾಪಕರು ಹಾಗೂ ಬೆಳಗಾವಿ ಡಾ. ಬೆಟಗೇರಿ ಕೃಷ್ಣಶರ್ಮ ಟ್ರಸ್ಟ್‌ನ ಅಧ್ಯಕ್ಷೆ ಡಾ. ವಿನಯಾ ಒಕ್ಕುಂದ ಅವರು ಕಾರ್ಯಕ್ರಮದಲ್ಲಿ ಕಿತ್ತೂರು ರಾಣಿ ಚನ್ನಮ್ಮ  ಅವರ ಕುರಿತು ವಿಶೇಷ ಉಪನ್ಯಾಸ ನೀಡಿದರು. 

  ಹಿರಿಯ ನ್ಯಾಯವಾದಿ ಚಂದ್ರಶೇಖರ ಎಸ್‌. ನೇಗಿನಾಳ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಸದಸ್ಯ ಶಂಭು ಸಾಲಿಮನಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿದರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಆರತಿ ದೇವಶಿಖಾಮಣಿ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. 

ವೇದಿಕೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ, ವೀರಮಾತೆ ಕಿತ್ತೂರ ರಾಣಿ ಚನ್ನಮ್ಮಾಜಿ ಪ್ರತಿಷ್ಠಾನದ ನಾಗರಾಜ ಶಿ. ಪಟ್ಟಣಶೆಟ್ಟಿ, ನಿಂಗಣ್ಣ ಕರಿಕಟ್ಟಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಪ್ರದೀಪ ಎಂ. ಪಾಟೀಲ ಅವರು ಉಪಸ್ಥಿತರಿದ್ದರು.  

ವೇದಿಕೆ ಕಾರ್ಯಕ್ರಮದ ನಂತರ ಸುಧಾ ಕಬ್ಬೂರ ಮತ್ತು ತಂಡದವರಿಂದ ಕಿತ್ತೂರು ರಾಣಿ ಚನ್ನಮ್ಮ ಕುರಿತ ರೂಪಕವನ್ನು ಪ್ರಸ್ತುತಪಡಿಸಲಾಯಿತು.   

  ಕಾರ್ಯಕ್ರಮದಲ್ಲಿ ಸಮುದಾಯದ ಗುರು ಹಿರಿಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.