ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ
Kittur Rani Channamma Jayanti on October 23rd
ಅಕ್ಟೋಬರ್ 23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ
ಧಾರವಾಡ 14: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಗೆ ಕಿತ್ತೂರು ರಾಣಿ ಚನ್ನಮ್ಮ ಜಯಂತಿಯನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಹೇಳಿದರು.
ಅವರು ಇಂದು (ಅ.14) ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಭವನದಲ್ಲಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿವರ್ಷದಂತೆ ಆಚರಿಸೋಣ ಎಂದು ತಿಳಿಸಿದರು.
ಕಿತ್ತೂರು ಉತ್ಸವದ ಜ್ಯೋತಿ ರಥಯಾತ್ರೆಯು ಧಾರವಾಡ ಜಿಲ್ಲೆಗೆ ಅಕ್ಟೋಬರ್ 19 ರಂದು ಬೆಳಿಗ್ಗೆ 11:30 ಗಂಟೆಗೆ ಆಗಮಿಸಲಿದ್ದು, ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಕಿತ್ತೂರು ಉತ್ಸವ ಜ್ಯೋತಿಯನ್ನು ಜಿಲ್ಲಾಡಳಿತದಿಂದ ಸ್ವಾಗತಿಸಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯಲ್ಲಿ ಸಮಾಜದ ಹಿರಿಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 