ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಆಚರಣೆ.
Kittur Rani Chennamma Jayanti celebration at Ghanamateshwara Educational Institute.
ಲೋಕದರ್ಶನ ವರದಿ
ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಕಿತ್ತೂರ ರಾಣಿ ಚೆನ್ನಮ್ಮ ಜಯಂತಿ ಆಚರಣೆ.
ತಾಳಿಕೋಟೆ 23: ಪಟ್ಟಣದ ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿಕಿತ್ತೂರ ರಾಣಿ ಚೆನ್ನಮ್ಮ ಅವರ 247ನೇ ಜಯಂತ್ಯೋತ್ಸ-ವವನ್ನುದಿ-ನಾಂಕ:- 23/10/2025 ಆಚರಿಸಲಾಯಿತು. ಈ ಸಮಯದಲ್ಲಿಸಂ
ಸ್ಥೆಯ ಅಧ್ಯಕ್ಷರಾದ ಎಸ್.ಎಂ.ಸಜ್ಜನ ಅವರು ಮಾತನಾಡಿ ಬ್ರಿಟಿಷರು ಭಾರತದಲ್ಲಿ ಕಾಲೂರುವ ಸಮಯದಲ್ಲಿ ಇಲ್ಲಿಯ ರಾಜಕೀಯ ಪರಿಸ್ಥಿತಿ ಬಹಳ ವಿಲಕ್ಷಣವಾಗಿತ್ತು. ಉತ್ತರ ಹಿಂದುಸ್ಥಾನದಲ್ಲಿ ಮೊಗಲ ಬಾದಶಾಹಿ ನಿರ್ಬಲವಾಗಿತ್ತು. ದಕ್ಷಿಣದಲ್ಲಿ ಸ್ವರಾಜ್ಯದ ವಿಸ್ತರಣೆಗಾಗಿ ಹೋರಾಡುತ್ತಿದ್ದ ಪೇಶ್ವೆ, ಆಕ್ರಮಣಕಾರಿ ಧೋರಣೆಯ ಹೈದರಾಬಾದಿನ ನಿಜಾಮಶಾಹಿ ಹಾಗು ಮೈಸೂರಿನ ಹೈದರ್ ಅಲಿ ಇವರೆಲ್ಲರ ನಡುವೆ ತಮ್ಮ ಉಳಿವಿಗಾಗಿ ಹೋರಾಡುತ್ತಿದ್ದ ಚಿಕ್ಕ ಪುಟ್ಟ ಪಾಳೆಗಾರರು.
ಇಂತಹ ರಾಜಕೀಯ ಪರಿಸ್ಥಿತಿ ಧೂರ್ತ, ಕ್ರೂರ ಧೋರಣೆಯ ಬ್ರಿಟಿಷ ಈಸ್ಟ ಇಂಡಿಯಾ ಕಂಪನಿಗೆ ಸುವರ್ಣಾವಕಾಶವನ್ನು ಒದಗಿಸಿತ್ತು. ಇಂತಹ ಸಮಯದಲ್ಲಿ ಮಲ್ಲಸರ್ಜನ ದೊರೆಯನ್ನು ಟಿಪ್ಪು ಸುಲ್ತಾನನು ಸೆರೆ ಹಿಡಿದು ಕಪಾಲದುರ್ಗದಲ್ಲಿ ಸೆರೆಯಿಟ್ಟಿದ್ದನು. ಉಪಾಯದಿಂದ ತಪ್ಪಿಸಿಕೊಂಡ ದೊರೆ 1803 ರಲ್ಲಿ ವೆಲ್ಲೆಸ್ಲಿಗೆ ನೆರವು ನೀಡಿ ಕಿತ್ತೂರನ್ನು ಭದ್ರ ಗೊಳಿಸಿದ್ದನು. ಇಂದಿನ ಸಮಾಜಕ್ಕೆಮತ್ತು ವಿದ್ಯಾಥಿಗಳಿಗೆ ಸ್ಪೂರ್ತಿದಾಯಕವಾಗಿದ್ದು ಅವರಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದರು.
ಈ ಸಮಯದಲಿ ್ಲಸಂಸ್ಥೆಯ ಕಾಯದರ್ಶಿ ವಿವೇಕಾನಂದಸಜ್ಜನ, ಮುಖ್ಯಗುರುಗಳಾದಬಿ.ಜಿ.ಸಜ್ಜನ, ಶ್ರೀಮತಿ ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದಸುಣಧೋಳಿ, ಪಿಯುಕಾಲೇಜ್ ಪ್ರಾಚಾರ್ಯ ಶ್ರೀ ಬಿ.ಎಸ್ ಮಾಲಿಪಾಟೀಲ್ ಸಿಬಿಎಸ್‌ಇಪ್ರಾಚಾರ್ಯಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯಶ್ರೀಮತಿಜಿ.ಎನ್.ಪಾಟೀಲ, , ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳುಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 