ಅರಣ್ಯ ಹಕ್ಕು ಕಾಯ್ದೆಯ ಬಗ್ಗೆ ಸಂಪೂರ್ಣವಾಗಿ ಅರಿಯಿರಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ
Know everything about the Forest Rights Act, Additional District Magistrate Sajid Mulla
ಕಾರವಾರ 22: ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಸಂಪೂರ್ಣವಾಗಿ ತಿಳಿದುಕೊಂಡು, ಜಿಲ್ಲೆಯಲ್ಲಿ ಈ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸಮರ್ಕ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ , ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳನ್ನು ಮಾನ್ಯ ಮಾಡುವ) ಅಧಿನಿಯಮ-2006 (ನಿಯಮ-2007ರ 2) ಮತ್ತು ನಿಯಮಗಳು 2008 (ನಿಯಮಗಳ ತಿದ್ದುಪಡಿ-2012) ರ ಅನುಷ್ಠಾನ ಕುರಿತು, ಗ್ರಾಮ ಮಟ್ಟದ ಅರಣ್ಯ ಹಕ್ಕು ಸಮಿತಿ, ಉಪ ವಿಭಾಗ ಮಟ್ಟದ ಅರಣ್ಯ ಹಕ್ಕು ಸಮಿತಿ ಹಾಗೂ ಜಿಲ್ಲಾ ಮಟ್ಟದ ಅರಣ್ಯ ಹಕ್ಕು ಸಮಿತಿಗಳ ಸದಸ್ಯರು ಹಾಗೂ ಇಲಾಖೆಗೆ ಸಂಬಂಧಿಸಿ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಒಂದು ದಿನದ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಅತೀ ಹೆಚ್ಚಿನ ಪ್ರಮಾಣದ ಅರಣ್ಯ ಪ್ರದೇಶವಿದ್ದು, ಇಡೀ ರಾಜ್ಯದಲ್ಲೇ ಅತ್ಯಧಿಕ ಸಂಖ್ಯೆಯಲ್ಲಿ ಅರಣ್ಯ ಹಕ್ಕು ಕುರಿತ ಅರ್ಜಿಗಳು ಜಿಲ್ಲೆಯಲ್ಲಿ ಸಲ್ಲಿಕೆಯಾಗಿದ್ದು, ಈ ಎಲ್ಲಾ ಅರ್ಜಿಗಳನ್ನು ಪರೀಶೀಲಿಸಿ ಸೂಕ್ತ ರೀತಿಯಲ್ಲಿ ಇತ್ಯರ್ಥ ಪಡಿಸಲು ಅರಣ್ಯ ಹಕ್ಕು ಕಾಯ್ದೆಯ ಕುರಿತ ಸಂಪೂರ್ಣ ವಿವರಗಳನ್ನು ತಿಳಿಯುವ ಅವಶ್ಯಕತೆಯಿದ್ದು, ಕಾಯ್ದೆಯಲ್ಲಿನ ನಿಯಮಗಳು, ತಿದ್ದುಪಡಿಗಳು, ದಾಖಲೆಗಳ ಸಂಗ್ರಹ ಮುಂತಾದ ಎಲ್ಲಾ ಅಂಶಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಿಳಿದುಕೊಂಡು ಅದರಂತೆ ಕಾರ್ಯನಿರ್ವಹಿಸಬೇಕು ಎಂದರು.
ಈಗಾಗಲೇ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಪರೀಶೀಲಿಸಿ ನಿಗಧಿತ ಅವಧಿಯೊಳಗೆ ಅವುಗಳನ್ನು ಕಾನೂನು ರೀತಿಯಲ್ಲಿ ವಿಲೇವಾರಿ ಮಾಡುವಂತೆ ತಿಳಿಸಿದ ಅವರು, ತಿರಸ್ಕೃತ ಅರ್ಜಿಗಳ ಪುನರ್ ಪರೀಶೀಲನೆ ಕಾರ್ಯವನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಅರಣ್ಯ ಹಕ್ಕು ಕಾಯ್ದೆಯ ಕುರಿತು ಒರಿಸ್ಸಾ ದಿಂದ ಆಗಮಿಸಿದ್ದ ವಿಷಯ ತಜ್ಞರಾದ ವೈ.ಗಿರಿರಾವ್, ಕಾರ್ಯಕ್ರಮ ಅಧಿಕಾರಿ ಪ್ರಿಯಾಂಕ ಸಿಂಗ್, ಶಿರಸಿ ಉಪ ವಿಭಾಗಾಧಿಕಾರಿ ಚಂದ್ರಶೇಖರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪ್ರಕಾಶ್ ಹಾಲಮ್ಮನವರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ವೈ.ಕೆ.ಉಮೇಶ್ ಉಪಸ್ಥಿತರಿದ್ದರು.
ಜಿಲ್ಲೆಯ ಎಲ್ಲಾ ತಾಲೂಕುಗಳು ತಹಸೀಲ್ದಾರ್ ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯ ಸಂರಕ್ಷಣಾಧಿಕಾರಿಗಳು,ಭೂ ದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕಾರ್ಯಗಾರದಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 