ಮಾಜಿ ಸಚಿವರ ಸಹೋದರನ ಕೊಚ್ಚಿ ಕೊಲೆ

ಕಲಬುರಗಿ, ಫೆ.29 :    ಮಾಜಿ ಸಚಿವ ಸಿ. ಗುರುನಾಥ ಅವರ ಅಣ್ಣನ ಮಗ ಸತೀಶ ಕಂಬಾನೋರ (42) ರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ಶಹಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಶಂಕರವಾಡಿ ರಘೋಜಿ ಫ್ಯಾಕ್ಟರಿ ಬಳಿ ಮೃತದೇಹ ಪತ್ತೆಯಾಗಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಇವರ ಕಿರಿಯ ಸಹೋದರ ಶಹಾಬಾದ ನಗರ ಸಭೆಯ ಮಾಜಿ ಅಧ್ಯಕ್ಷ ಗಿರೀಶ ಕಂಬಾನೋರ ಅವರ ಮೇಲೆಯೂ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಕೊಲೆಗೆ ಹಳೆಯ ದ್ವೇಷವೇ ಕಾರಣ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಶಹಬಾದ್ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.