ಕೋಳಿಕೊಪ್ಪ ಜಾತ್ರೆ ಅದ್ಧೂರಿ ಆರಂಭ: ಉಡಿ ಸೇವೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿ
Kojikoppa Fair begins with grand opening: Minister Lakshmi Hebbalkar participates in the Udi Seva
ಬೆಳಗಾವಿ 28: ಕೋಳಿಕೊಪ್ಪ ಗ್ರಾಮದ ಶ್ರೀ ಗ್ರಾಮದೇವಿಯ ಜಾತ್ರಾ ಮಹೋತ್ಸವ ಭಕ್ತಿಭಾವ ಮತ್ತು ಅದ್ಧೂರಿಯ ನಡುವೆ ಜರುಗಿತು. 11 ವರ್ಷಗಳ ಬಳಿಕ ನಡೆಯುತ್ತಿರುವ ಈ ಜಾತ್ರೆಯಲ್ಲಿ ಸಾವಿರಾರು ಭಕ್ತರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಉಡಿತುಂಬಿದರು. ಈ ಸಂದರ್ಭದಲ್ಲಿ ವಿಧಾನ ಪರಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮಸ್ಥರು ಮತ್ತು ಭಕ್ತರು ಭಾರೀ ಸಂಖ್ಯೆಯಲ್ಲಿ ಸೇರಿ ಜಾತ್ರೆಯನ್ನು ಸಂಭ್ರಮದ ವಾತಾವರಣದಲ್ಲಿ ಆಚರಿಸಿದರು.ಗ್ರಾಮದ ಪ್ರತಿಯೊಂದು ಮನೆಯಲ್ಲೂ ಹಬ್ಬದ ಸಂಭ್ರಮ ಕಂಡುಬಂದಿದ್ದು, ವಿವಿಧ ಧಾರ್ಮಿಕ ವಿಧಿವಿಧಾನಗಳು ನೆರವೇರಿಸಲ್ಪಟ್ಟವು. ಜಾತ್ರೆಯ ಅಂಗವಾಗಿ ಪೂಜೆ, ಹರಕೆ, ಉಡಿ ಸೇವೆ ಸೇರಿದಂತೆ ಹಲವು ಆಚರಣೆಗಳು ನಡೆದವು.
ಗ್ರಾಮಸ್ಥರು, ಹಿರಿಯರು, ಯುವಕರು ಮತ್ತು ಮಹಿಳೆಯರು ಸಮಾನವಾಗಿ ಪಾಲ್ಗೊಂಡು ಜಾತ್ರೆಯನ್ನು ಯಶಸ್ವಿಗೊಳಿಸಿದರು. ಹಲವು ವರ್ಷಗಳ ಬಳಿಕ ನಡೆಯುತ್ತಿರುವ ಈ ಜಾತ್ರೆ ಗ್ರಾಮದಲ್ಲಿ ವಿಶೇಷ ಉತ್ಸಾಹ ಮೂಡಿಸಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 