ಕೋಲ್ಕತ್ತಾ 18: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೋಲ್ಕತ್ತಾದ ಆರ್.ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲ್ಕತ್ತಾ ಸೆಷನ್ಸ್ ನ್ಯಾಯಾಲಯ ಶನಿವಾರ ಮಹತ್ವದ ತೀರ್ಪು ನೀಡಿದೆ.
ಕಳೆದ ಆಗಸ್ಟ್ 9 ರಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯೆಯ ರಕ್ತಸಿಕ್ತ ಮೃತದೇಹ ಪತ್ತೆಯಾಗಿತ್ತು. ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಸಂಜಯ್ ರಾಯ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಕೋಲ್ಕತ್ತಾದ ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಅನಿರ್ಬನ್ ದಾಸ್ ಅವರು, ಕೇವಲ 57 ದಿನಗಳಲ್ಲೇ ಪ್ರಕರಣದ ತೀರ್ಪು ಪ್ರಕಟಿಸಿದ್ದು, ಆರೋಪಿ 33 ವರ್ಷದ ಸಂಜಯ್ ರಾಯ್ ದೋಷಿ ಎಂದು ಹೇಳಿದ್ದಾರೆ. ಆದರೆ ಶಿಕ್ಷೆಯ ಪ್ರಮಾಣವನ್ನು ಜನವರಿ 20 ರಂದು ಪ್ರಕಟಿಸುವುದಾಗಿ ತಿಳಿಸಿದೆ.