ಕಂಪ್ಲಿ ಉತ್ಸವ: ಪುರಸಭೆಯಿಂದ ಸ್ವಚ್ಚತಾ ಕಾರ್ಯಕ್ಕೆ ಚಾಲನೆ
Kompli Utsav: Municipality launches cleanliness drive
ಕಂಪ್ಲಿ 10 : ಪುರಸಭೆ ವತಿಯಿಂದ ಸ್ವಚ್ಛಭಾರತ್ ಹಾಗೂ ಕಂಪ್ಲಿ ಉತ್ಸವಹಿ2026ರ ಅಂಗವಾಗಿ ಮಂಗಳವಾರ ಪಟ್ಟಣದಲ್ಲಿ ಮಂಗಳವಾರ ಪುರಸಭೆ ಆಶ್ರಯದಲ್ಲಿ ಸ್ವಚ್ಛತಾ ಓಟ ನಡೆಯಿತು. ಸಚಿವರು, ಜಿಲ್ಲಾಧಿಕಾರಿಗಳ, ಸಂಸದರು, ಶಾಸಕರಾದ ಜೆ. ಎನ್. ಗಣೇಶರವರ ಮಾರ್ಗದರ್ಶದಡಿಯಲ್ಲಿ ಪುರಸಭೆ ಮುಖ್ಯಾಧಿಕಾರಿ ಬಿ. ಮಲ್ಲಿಕಾರ್ಜುನ ಅವರು ಸ್ವಚ್ಛತಾ ಓಟಕ್ಕೆ ಚಾಲನೆ ನೀಡಿ ‘ ಸ್ವಾಮಿ ವಿವೇಕಾನಂದರ ಮೌಲ್ಯಗಳು, ಸದೃಢ ಶರೀರ ಮತ್ತು ಮನಸ್ಸಿನ ಮಹತ್ವ ಮತ್ತು ಸ್ವಚ್ಛ, ಆರೋಗ್ಯಕರ ವಾತಾವರಣ ನೆನಪಿಸಿದರು. ವಿಶೇಷವಾಗಿ ರೂಪಿಸಿದ ಈ ಸ್ವಚ್ಛತಾ ಓಟವು ಯುವಜನತೆಗೆ ಪ್ರೇರಣೆ ನೀಡಿತು.
ಕಂಪ್ಲಿಯ ಜನತೆಯಲ್ಲಿ ತಮ್ಮ ಪಟ್ಟಣವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿತು. ಸ್ವಚ್ಛತಾ ಓಟದಲ್ಲಿ ನೂರಾರು ಜನರು ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿಗಳಿಂದ- 65ರ ವಯೋಮಾನದವರು ಓಟದಲ್ಲಿ ಕಂಡು ಬಂದರು. ವಿದ್ಯಾರ್ಥಿಗಳು, ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಅಧಿಕಾರಿಗಳು, ವಿವಿಧ ಸಂಘಹಿಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡರು. ಜನರು ಪ್ರಾಗೋಥಾನ್ ಓಟಕ್ಕೆ ಸ್ವಯಂಪ್ರೇರಿತವಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪುರಸಭೆಯ ಅಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರು ವಿದ್ಯಾರ್ಥಿಗಳು ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 