ಕೊಣ್ಣೂರು ಗ್ರಾ.ಪಂ. ಮಟ್ಟದ ಕೆಡಿಪಿ ಸಭೆ
Konnoor Gr.Pt. level KDP meeting
ಕೊಣ್ಣೂರು ಗ್ರಾ.ಪಂ. ಮಟ್ಟದ ಕೆಡಿಪಿ ಸಭೆ
ತಾಳಿಕೋಟಿ 13: ತಾಲೂಕಿನ ಕೊಣ್ಣೂರು ಗ್ರಾಮ ಪಂಚಾಯಿತಿ ಮಟ್ಟದ ಕೆಡಿಪಿ ಸಭೆ ಶುಕ್ರವಾರ ನಡೆಯಿತು. ಗ್ರಾಮ ಪಂಚಾಯಿತಿ ಆಡಳಿತಾಧಿಕಾರಿ ಮಹೇಶ ಜೋಶಿ ಅಧ್ಯಕ್ಷತೆ ವಹಿಸಿದ್ದರು.
ಸಭೆಯಲ್ಲಿ ಸಂಬಂಧಪಟ್ಟ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಗ್ರಾಮಗಳ ಮೂಲಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ವಿದ್ಯುತ್ ಹಾಗೂ ಆರೋಗ್ಯ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ಭೀಕರ ಬರಗಾಲದ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗದ ಪುರುಷ ಹಾಗೂ ಮಹಿಳಾ ಕೂಲಿ ಕಾರ್ಮಿಕರಿಗೆ ಸರ್ಕಾರದ ವಿಶೇಷ ಯೋಜನೆಯಾದ ವಿ.ಬಿ.-ಜಿ-ರಾಮ್ ಜಿ ಅಡಿಯಲ್ಲಿ ಸಮರ್ಕವಾಗಿ ಉದ್ಯೋಗ ಒದಗಿಸುವ ಬಗ್ಗೆಯೂ ಚರ್ಚೆ ನಡೆಯಿತು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುಜಾತ ಯಡ್ರಾಮಿ ಮಾತನಾಡಿ, ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉದ್ಯೋಗಾವಕಾಶ ಕಲ್ಪಿಸಲಾಗುವುದು. ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಸಭೆಗೆ ಕಂದಾಯ, ನೀರಾವರಿ, ಪಶುಪಾಲನೆ, ಕೆಬಿಜೆಎನ್ಎಲ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಗೈರುಹಾಜರಾಗಿದ್ದಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಮುಂದಿನ ಸಭೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ಗೈರುಹಾಜರಾಗುವ ಅಧಿಕಾರಿಗಳಿಗೆ ಸಂಬಂಧಪಟ್ಟ ಇಲಾಖೆಯಿಂದ ನೋಟಿಸ್ ಜಾರಿಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು. ಸಭೆಯಲ್ಲಿ ಊರಿನ ಗಣ್ಯರು, ಗ್ರಾಮಸ್ಥರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 