ಕೊಪ್ಪಳ 15: ಲೋಕಸಭಾ ಚುನಾವಣೆ ನಿಮಿತ್ಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದಲ್ಲಿ ಸೋಮವಾರದಂದು ಮತದಾನ ಜಾಗೃತಿ ಜಾಥದ ಮೂಲಕ ಅರಿವು ಮೂಡಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕೊಪ್ಪಳ ಜಿಲ್ಲಾ ಸ್ವೀಪ್ ಸಮಿತಿಯು ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮ ಪಂಚಾಯತ್ ಹಾಗೂ ಅಂಗನವಾಡಿ ಮತ್ತು ಆಶಾ ಕಾರ್ಯಕತರ್ೆಯರಿಂದ ಮತದಾನ ಜಾಗೃತಿಗಾಗಿ ಸ್ವೀಪ್ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಕುಷ್ಟಗಿ ತಾ.ಪಂ. ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯಿತಿ ಪಿಡಿಒ ಸಿಬ್ಬಂದಿಗಳು ಉಪಸ್ಥಿತರಿದ್ದರು. ಜಾಥಾವು ಗ್ರಾಮದ ವಿವಿಧೆಡೆ ಸಂಚರಿಸಿ ಸಾರ್ವಜನಿಕರಲ್ಲಿ ಮತ ಜಾಗೃತಿ ಮೂಡಿಸಲಾಯಿತು. ಅಲ್ಲದೆ ಗ್ರಾಮದ ಸಾರ್ವಜನಿಕರೊಳಗೊಂಡು ಮತದಾನ ಪ್ರತಿಜ್ಞಾವಿಧಿಯನ್ನು ಇದೇ ಸಂದರ್ಭದಲ್ಲಿ ಸ್ವೀಕರಿಸಲಾಯಿತು.