ಕೊಪ್ಪಳ: ಗೃಹರಕ್ಷಕ ದಳದ ಸಿ.ಸಿ. ಕಮಾಂಡರ್ ವೀರಣ್ಣ ಬಡಿಗೇರ್ ನಿವೃತ್ತಿ
Koppal: CC of Home Guard. Commander Veeranna Badiger retires
ಕೊಪ್ಪಳ, 04: ಕೊಪ್ಪಳ ಜಿಲ್ಲೆ ಕುಕನೂರು ಹಾಗೂ ಕೊಪ್ಪಳದಲ್ಲಿ ಸುಮಾರು 50 ವರ್ಷಗಳ ಕಾಲ ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಿದ ಕುಕನೂರಿನ ಸಿ.ಸಿ. ಕಮಾಂಡರ್ ವೀರಣ್ಣ ಬಡಿಗೇರ್ ಅವರು ಮಂಗಳವಾರ ನಿವೃತ್ತಿ ಹೊಂದಿದರು.
ಅವರ ನಿವೃತ್ತಿ ಅಂಗವಾಗಿ ಕೊಪ್ಪಳದ ಗೃಹರಕ್ಷಕ ದಳದ ಕಚೇರಿಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ನಿವೃತ್ತರಾದ ವೀರಣ್ಣ ಬಡಿಗೇರ್ ಅವರಿಗೆ ಶಾಲು ಹೊದಿಸಿ, ಪುಷ್ಪಗುಚ್ಛ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ವೀರಣ್ಣ ಬಡಿಗೇರ್, "ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಿದ ದಿನಗಳು ನನ್ನ ಜೀವನದ ಅತ್ಯಂತ ಮೌಲ್ಯಯುತ ಕ್ಷಣಗಳಾಗಿವೆ. ಈ ಇಲಾಖೆಯಲ್ಲಿ ಕೆಲಸ ಮಾಡುವಾಗ ಉತ್ತಮ ಮೌಲ್ಯಗಳನ್ನು ಕಲಿತಿದ್ದೇನೆ ಹಾಗೂ ಅನೇಕ ಉತ್ತಮ ಸ್ನೇಹಿತರನ್ನು ಸಂಪಾದಿಸಿದ್ದೇನೆ. ನನ್ನ ಸೇವಾ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲಾ ಮೇಲಾಧಿಕಾರಿಗಳು ಹಾಗೂ ಸಹೋದ್ಯೋಗಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ನನ್ನಿಂದ ಯಾವುದೇ ತಪ್ಪುಗಳಾಗಿದ್ದರೆ ಕ್ಷಮಿಸಿ, ಎಲ್ಲರ ಭವಿಷ್ಯ ಉಜ್ವಲವಾಗಿರಲಿ" ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿಲ್ಲಾ ವರದಿಗಾರರಾದ ಸರಸ್ವತಿ ನಾಗರಾಜ್ ಅವರು ಮಾತನಾಡಿ, ವೀರಣ್ಣ ಬಡಿಗೇರ್ ಅವರು ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ ಹಾಗೂ ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದಾರೆ ಎಂದು ಶ್ಲಾಘಿಸಿದರು.
ಗೃಹರಕ್ಷಕ ದಳದ ಸಿಬ್ಬಂದಿಗೆ ಸಮಯಪಾಲನೆ, ಶಿಸ್ತು, ವಿವಿಧ ಬಂದೋಬಸ್ತ್ ಹಾಗೂ ತುರ್ತು ಸೇವೆಗಳಲ್ಲಿ ಸರ್ಕಾರದ ಜವಾಬ್ದಾರಿಗಳನ್ನು ಸಮರ್ಕವಾಗಿ ನಿರ್ವಹಿಸುವ ಮೂಲಕ ಇಲಾಖೆಯ ಬೆಳವಣಿಗೆಗೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.
ನಿವೃತ್ತಿ ಎನ್ನುವುದು ಸೇವೆಯ ಅಂತ್ಯವಲ್ಲ, ಜೀವನದ ಹೊಸ ಅಧ್ಯಾಯದ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಅವರು ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವುದರ ಜೊತೆಗೆ ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಳ್ಳಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಶಿವಶರಣಪ್ಪ, ಮಂಜುನಾಥ್, ಎಸ್. ಮೀರಾಸಾಬ್, ಪಿ. ಕುಮಾರ್, ಸಿ. ಮಂಜುನಾಥ್, ಗುರುಬಸವ, ವಿಜಯಮಹಾಂತೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 