ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳ ದಿಢೀರ್ ಭೇಟಿ: ಪರೀಶೀಲನೆ
Koppal District Hospital District Commissioner Dr. Suresh Itna's Sudden Visit: A Review
ಕೊಪ್ಪಳ 12: ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಅವರು ಸೋಮವಾರ ದಿಢೀರ್ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸ್ಥಿತಿಗತಿಗಳ ಪರೀಶೀಲಿಸಿ, ಆಸ್ಪತ್ರೆಯ ವೈದ್ಯರ ಮತ್ತು ಸಿಬ್ಬಂದಿಗಳ ಹಾಜರಾತಿಯನ್ನು ಪರೀಶೀಲನೆ ನಡೆಸಿದರು.
ಜಿಲ್ಲಾಧಿಕಾರಿಗಳು ಮಾತನಾಡಿ, ಆಸ್ಪತ್ರೆಯಲ್ಲಿ ಸ್ವಚ್ಚತೆ ಕಾಪಾಡಬೇಕು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಚೀಟಿ ಪಡೆಯುವವರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಬೇಗನೆ ಚೀಟಿಯನ್ನು ನೀಡಲು ಇನ್ನೂ ಹೆಚ್ಚಿನ ಕೌಂಟರ್‌ಗಳನ್ನು ತೆಗೆದು, ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಸಂಬಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಸ್ಪತ್ರೆಯ ಸೈಕಿಯಾಟ್ರಿ ವಿಭಾಗದಲ್ಲಿ ರೋಗಿಗಳ ಉಪಚಾರಕ್ಕೆ ಪ್ರತ್ಯೇಕ ವ್ಯವಸ್ಥೆ ಇದೆಯೆ. ಡ್ರಗ್ ಅಡಿಕ್ಟ್ ಆದವರಿಗೆ ದುಶ್ಚಟಗಳನ್ನು ಬಿಡಿಸಲು ಅವರಿಗೆ ಕೌನ್ಸಿಲಿಂಗ್ ಯಾವ ರೀತಿಯಲ್ಲಿ ಮಾಡುತ್ತಿರಾ. ಡ್ರಗ್ ಅಡಿಕ್ಟನಂತಹ ದುಶ್ಚಟಗಳಿಗೆ ಜನರು ಬಲಿಯಾಗದಂತೆ ಹೆಚ್ಚಿನ ಜಾಗೃತಿ ಮೂಡಿಸಲು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದರು. ಇದೇ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿ, ಪರೀಶೀಲಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ಸೇರಿದಂತೆ ಇತರೆ ಹಲವಾರು ಜನರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 