ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ
ಕೊಪ್ಪಳ 27: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಮಾರ್ಚ್ 28 ಮತ್ತು 29 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಮಾ. 28 ರಂದು ಕನಕಗಿರಿ ವಿಧಾನಸಭಾ ಕ್ಷೇತ್ರದ ಬೇವಿನಹಾಳ, ಚೆಳ್ಳೂರು ಹಾಗೂ ಮೈಲಾಪೂರ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ನಂತರ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು.
ಮಾ. 29 ರಂದು ಮಧ್ಯಾಹ್ನ 12.30 ಗಂಟೆಗೆ ಕಾರಟಗಿ ತಹಶೀಲ್ದಾರ್ ಕಛೇರಿಯಲ್ಲಿ ಕಾರಟಗಿ ತಾಲ್ಲೂಕಿನ ಬಕರ್ ಹುಕಂ ಸಮಿತಿಯ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಪಾಲ್ಗೊಳ್ಳುವರು. ನಂತರ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಕನಕಗಿರಿ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರ ಭೇಟಿ ಮತ್ತು ಕುಂದುಕೊರತೆಗಳ ವಿಚಾರಣೆ ಮಾಡುವರು. ಬಳಿಕ ಅಂದು ಕಾರಟಗಿಯಲ್ಲಿ ವಾಸ್ತವ್ಯ ಮಾಡುವರು. ಮುಂದಿನ ಕಾರ್ಯಕ್ರಮಗಳನ್ನು ನಂತರ ತಿಳಿಸಲಾಗುವುದು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.