ಕೊಪ್ಪಳ ವಿವಿಯ ಅಂತರ್ ಕಾಲೇಜು ಖೋಖೋ ಚಾಂಪಿಯನ್
Koppal University Inter-College Kho-Kho Champion
ಲೋಕದರ್ಶನ ವರದಿ
ಕೊಪ್ಪಳ 18: ಕೊಪ್ಪಳ ವಿಶ್ವವಿದ್ಯಾಲಯ ಅಡಿಯಲ್ಲಿ ನಡೆದ ಅಂತರ ಕಾಲೇಜು ಮಹಿಳೆಯರ ಖೋಖೋ ಪಂದ್ಯಾಟಗಳು ದಿನಾಂಕ 17 ಮಾರ್ಚ 2026 ರಂದು ಗಂಗಾವತಿಯಲ್ಲಿ ಎಸ್.ಕೆ.ಎನ್.ಜಿ ಸರಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಜರುಗಿದವು. ಸದರಿ ಸ್ಪರ್ಧೆಯಲ್ಲಿ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರ ಖೋಖೋ ತಂಡ ಪ್ರಥಮ ಸ್ಥಾನ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಸದರಿ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಡಾ. ಆರ್.ಮರೇಗೌಡ ಮತ್ತು ಶ್ರೀ ಗವಿಸಿದ್ಧೇಶ್ವರ ಟ್ರಸ್ಟಿನ ಎಲ್ಲಾ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರಾದ ಡಾ. ಚನ್ನಬಸವ, ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀ ವಿನೋದ ಸಿ. ಮುದಿನಬಸನಗೌಡರ ಹಾಗೂ ಕಾಲೇಜಿನ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 