ಕೋಥಳಿವಾಡಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ
Kothaliwadi School Annual Friendship Conference
ಚಿಕ್ಕೋಡಿ 16: ಪ್ರತಿಯೊಂದು ಗ್ರಾಮದಲ್ಲಿಯೂ ಸರ್ಕಾರಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳಿಗೆ ಸರ್ಕಾರವು ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದೆ. ಆ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಪಡೆಯುವ ಗ್ರಾಮೀಣ ವಿದ್ಯಾರ್ಥಿಗಳು ಧೈರ್ಯಶಾಲಿಗಳಾಗಿರುತ್ತಾರೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರಾದ ಆರ್. ಸೀತಾರಾಮ ಅವರು ಅಭಿಪ್ರಾಯಪಟ್ಟರು.ಅವರು ಇತ್ತೀಚೆಗೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೋಥಳಿವಾಡಿಯಲ್ಲಿ ನಡೆದ “ಚಿಣ್ಣರ ನೀನಾದ” ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಸುಮಾರು 25 ವರ್ಷಗಳ ಹಿಂದೆ ಪ್ರಾರಂಭವಾದ ಈ ಶಾಲೆ ಇಂದು ಶೈಕ್ಷಣಿಕವಾಗಿ ಅಭಿವೃದ್ಧಿಯತ್ತ ಸಾಗುತ್ತಿದೆ. ಈ ಅವಧಿಯಲ್ಲಿ ಶಿಕ್ಷಕಿ ಬಿ. ಕಲಾವತಿ ಅವರು ತಮ್ಮ ಉತ್ತಮ ಬೋಧನೆಯ ಮೂಲಕ ಹಾಗೂ ಸರ್ಕಾರದ ಸೌಲಭ್ಯಗಳನ್ನು ಸಮರ್ಕವಾಗಿ ಬಳಸಿಕೊಂಡು ವಿದ್ಯಾರ್ಥಿಗಳನ್ನು ಸತ್ಪ್ರಜೆಗಳಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿದರು.ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಜೀವನದ ನೈಜ ಅನುಭವಗಳನ್ನು ಪಡೆದುಕೊಂಡು ಬೆಳೆದವರಾಗಿದ್ದು, ಧೈರ್ಯ ಮತ್ತು ಆತ್ಮವಿಶ್ವಾಸದಲ್ಲಿ ಮುಂಚೂಣಿಯಲ್ಲಿರುತ್ತಾರೆ ಎಂದು ಅವರು ವಿವರಿಸಿದರು. ಹಳ್ಳಿಗಳಲ್ಲಿ ಬೆಳೆಯುವ ಈ ಮಕ್ಕಳು ಎಲ್ಲಾ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಹೊಂದಿರುತ್ತಾರೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಸಂವಿಧಾನದ ಮಹತ್ವವನ್ನು ವಿವರಿಸಿದ ಅವರು, ವಿದ್ಯಾರ್ಥಿಗಳು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಉತ್ತಮ ನಾಗರಿಕರಾಗಿ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ವಿಷಯ ಪರೀವೀಕ್ಷಕರಾದ ಎಚ್.ಎಸ್. ಖಾಡೆ, ಉಪ ತಹಸೀಲ್ದಾರ್ ಖಾಂಡೇಕರ, ಪಿಡಿಒ ಗಾಯತ್ರಿ ಟೋಣ್ಣೆ, ಸಹಾಯಕ ಪ್ರಾಧ್ಯಾಪಕ ಡಾ. ಹೊಂಬಯ್ಯ, ಬಿಆರಿ್ಪ ಆನಂದ ಕಬಾಡಿಗೆ, ಸಿಆರಿ್ಪ ಕಾವೇರಿಹಿಪ್ಪರಿಗಿ, ತಾತಾಸಾಬ ಬಬಗೌಡ, ಎಸ್‌ಡಿಎಂಸಿ ಅಧ್ಯಕ್ಷ ಮಹಾಂತೇಶ್ ಖೋತ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ನಾಡಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಾಲೆಯ ಮುಖ್ಯ ಶಿಕ್ಷಕಿ ಬಿ. ಕಲಾವತಿ ಅವರು ಪ್ರಾಸ್ತಾವಿಕ ಭಾಷಣ ಹಾಗೂ ವಾರ್ಷಿಕ ವರದಿ ಮಂಡಿಸಿದರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 