ಲೋಕದರ್ಶನ ವರದಿ
ಕೊಟ್ಟೂರು 13: ಕೇಂದ್ರ ಸಕರ್ಾರದಿಂದ ಹೆಚ್ಚಿನ ಅನುದಾನ ತಂದು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೊಳಿಸಲಾಗುವುದು ಎಂದು ಸಂಸದ ವೈ.ದೇವೇಂದ್ರಪ್ಪ ಹೇಳಿದರು.
ಮಲ್ಲನಾಯ್ಕನಹಳ್ಳಿಯಲ್ಲಿ ಶುಕ್ರವಾರ ಶಿರಬಿ ಜಿಪಂ ಕ್ಷೇತ್ರದ ಬಿಜೆಪಿ ಘಟಕ ಹಮ್ಮಿಕೊಂಡಿದ್ದ ಪಕ್ಷದ ಬಲವರ್ಧನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚಚರ್ಿಸಿ, ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಶೀಘ್ರ ಜಾರಿಗೆ ತರಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಶಾಸಕ ನೇಮಿರಾಜ್ ನಾಯ್ಕ ಮಾತನಾಡಿ, ಹಗರಿಬೊಮ್ಮನಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಮರಳು ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದರೂ ಕ್ರಮವಿಲ್ಲವಾಗಿದೆ. ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆದರೆ, ಸುಳ್ಳು ದೂರುಗಳು ಠಾಣೆಗಳಲ್ಲಿ ದಾಖಲಿಸಿದರೆ ಸಹಿಸುವುದಿಲ್ಲ ಎಂದರು. ಶಿರಬಿ ಜಿಪಂ ಸದಸ್ಯೆ ಉಮಾದೇವಿ ಕೊಟ್ರೇಶ ಮಾತನಾಡಿ, ಜಿಪಂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಅನುದಾನ ಕೊಡುವಂತೆ ಸಂಸದ ದೇವೇಂದ್ರಪ್ಪರಿಗೆ ಮನವಿ ಮಾಡಿದರು. ಬಿಜೆಪಿ ಜಿಲ್ಲಾ ಅಧ್ಯಕ್ಷ ಚನ್ನಬಸವನಗೌಡ ಮಾತನಾಡಿದರು.