ಕೋಟೂರು: ನಿರಂತರ ವಿದ್ಯುತ್ ವ್ಯತ್ಯಯ ರೈತರಿಂದ ಆಕ್ರೋಶ
Kotur: Farmers outraged over frequent power outages
ಕೋಟೂರು 06: ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಮೂರು-ನಾಲ್ಕು ದಿನಗಳಿಂದ ನಿರಂತರವಾಗಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಜನಜೀವನ ಹಾಗೂ ಕೃಷಿ ಚಟುವಟಿಕೆಗಳು ತೀವ್ರವಾಗಿ ಅಸ್ತವ್ಯಸ್ತಗೊಂಡಿವೆ. ಸ್ಥಳೀಯರ ಆರೋಪದಂತೆ, ಕೋಟೂರು ನಗರದ ಕೆಐಬಿ ಮುಖ್ಯ ನಿರ್ವಹಣಾಧಿಕಾರಿಗಳು ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿರುವುದರಿಂದ ವಿದ್ಯುತ್ ಸರಬರಾಜು ಸರಿಯಾಗಿ ನಡೆಯುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲಾ ಘಟಕದ ಮುಖಂಡ ಸಿ.ಎ. ಗಾಳೆಪ್ಪ ಅವರು ಆರೋಪಿಸಿದ್ದಾರೆ.
ರೈತರು ಈಗಾಗಲೇ ಸಂಕಷ್ಟದಲ್ಲಿದ್ದು, ಕಳೆದ ಮೂರು-ನಾಲ್ಕು ದಿನಗಳಿಂದ ನೀರಾವರಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ಅವರು ತಿಳಿಸಿದ್ದಾರೆ. ಗ್ರಾಮೀಣ ಭಾಗದ ಹಲವಾರು ಹಳ್ಳಿಗಳಾದ ನಡುಮಾವಿನಹಳ್ಳಿ, ಉಜ್ಜಿನಿ, ಹರಕನಾಳ್, ಮೂತಿರ್ಕಲ್ ತಾಂಡ, ರಾಮಪುರ, ಜಾಗಟಗೆರಿ, ಬೆನಕನಹಳ್ಳಿ, ಬೈರದೇವರ ಗುಡ್ಡ ಸೇರಿದಂತೆ ಅನೇಕ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಕಂಡುಬಂದಿದೆ.
ತಕ್ಷಣವೇ ಸಮಸ್ಯೆ ಪರಿಹರಿಸದಿದ್ದರೆ ಏಇಃ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಇಂದು ಏಇಃ ಕಚೇರಿ ಮುಂದೆ ರೈತ ಸಂಘದ ಹಲವು ಸದಸ್ಯರು ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಸಿ. ರೇಖಾರವರು ಸೇರಿದಂತೆ ಅನೇಕ ರೈತಪರ ಸಂಘಟನೆಗಳ ಸದಸ್ಯರು ಹಾಜರಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಕಚೇರಿಯಲ್ಲಿ ಮಾತುಕತೆ ನಡೆದಿದ್ದು, ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 